ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಟೂರಿಸ್ಟ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ 20 ಮಂದಿ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ಪುತ್ತೂರಿನಲ್ಲಿ ನಡೆಯಲಿದ್ದ ಮದುವೆಗೆಂದು ಸಕಲೇಶಪುರದಿಂದ ಹೊರಟಿದ್ದ ಮಿನಿಬಸ್ ಅಡ್ಡಹೊಳೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಮಿನಿ ಬಸ್ನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ನೆಲ್ಯಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಹಾಗೂ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.