ಉಳ್ಳಾಲ: ಕೇರಳದಿಂದ ಮಂಗಳೂರಿಗೆ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ತಲಪಾಡಿ ಟೋಲ್ ಗೇಟ್ ಸಮೀಪ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಪೆರಾಜೆಯ ಬಂಗ್ರ ಮಂಜೇಶ್ವರ ನಿವಾಸಿ ಅಝೀಝ್ ಅಲಿಯಾಸ್ ಅಝೀಮ್ (36) ಬಂಧಿತ ಆರೋಪಿಯಾಗಿದ್ದಾನೆ. ಹಳೇ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಾಗ, ಈತನ ಬಳಿ 1 ಕೆ.ಜಿ ಗಾಂಜಾ ಪತ್ತೆಯಾಗಿದೆ.
ಈ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿರುವ ಉಳ್ಳಾಲ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.