ETV Bharat / state

ಮಂದಾರ ಪಾರಂಪರಿಕ ಮನೆ ಉಳಿಸುವಂತೆ ತುಳು ಅಕಾಡೆಮಿ ಅಧ್ಯಕ್ಷರ ಮನವಿ - ದಯಾನಂದ ಜಿ. ಕತ್ತಲ್‍ಸಾರ್ ಮನವಿ

ತುಳು ವಾಲ್ಮೀಕಿ ಎಂದೇ ಪ್ರಸಿದ್ಧರಾದ ಮಂದಾರ ಕೇಶವ ಭಟ್​ರವರ ಪಾರಂಪರಿಕ ಮನೆ ಮಾನವ ನಿರ್ಮಿತ ತ್ಯಾಜ್ಯ ದುರಂತದಲ್ಲಿ ಸಂಪೂರ್ಣ ಹಾನಿಗೀಡಾಗಿದೆ. ಈ ಮಹಾಕವಿಯ ವಾಸ್ತು ವಿನ್ಯಾಸವುಳ್ಳ ಮನೆಯನ್ನು ಉಳಿಸಿ ಸುಂದರ ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿಯಬೇಕೆಂದು ದಯಾನಂದ ಜಿ. ಕತ್ತಲ್‍ಸಾರ್ ಮನವಿ ಮಾಡಿದ್ದಾರೆ.

Dayananda G. Kuttalsar
ದಯಾನಂದ ಜಿ. ಕತ್ತಲ್‍ಸಾರ್
author img

By

Published : Jun 25, 2020, 2:27 AM IST

ಮಂಗಳೂರು: ಕೇಂದ್ರ ಭಾಷಾ ಸಮ್ಮಾನ್ ಪುರಸ್ಕಾರವನ್ನು ತುಳುವಿಗೆ ತಂದುಕೊಟ್ಟ, ತುಳು ಸಾಹಿತ್ಯ ಅಕಾಡೆಮಿಯ ಪ್ರಥಮ ಪ್ರಶಸ್ತಿ ಪುರಸ್ಕೃತ ಹಾಗೂ ರಾಜ್ಯ ಪ್ರಶಸ್ತಿ ವಿಜೇತ ಮಂದಾರ ಕೇಶವ ಭಟ್ಟರ ನೆನಪು ಅಜರಾಮರವಾಗಿರುವಂತೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‍ಸಾರ್ ತಿಳಿಸಿದ್ದಾರೆ.

ತುಳು ವಾಲ್ಮೀಕಿ ಎಂದೇ ಪ್ರಸಿದ್ಧರಾದ ಮಂದಾರ ಕೇಶವ ಭಟ್​ರವರ ಪಾರಂಪರಿಕ ಮನೆಯು ಮಾನವ ನಿರ್ಮಿತ ತ್ಯಾಜ್ಯ ದುರಂತದಲ್ಲಿ ಸಂಪೂರ್ಣ ಹಾನಿಗೀಡಾಗಿ ವಿನಾಶದ ಅಂಚಿನಲ್ಲಿದೆ. ಶತಮಾನವನ್ನು ಪೂರೈಸಿದ ಈ ಪಾರಂಪರಿಕ ಮನೆಯನ್ನು ಉಳಿಸುವ ನಿಟ್ಟಿನಲ್ಲಿ ತುಳು ಸಾಹಿತ್ಯ ಅಕಾಡೆಮಿಯು ತನ್ನ ವ್ಯಾಪ್ತಿಯಲ್ಲಿ ಸಂಪೂರ್ಣ ಸಹಕಾರ ನೀಡಲಿದೆ. ಈ ಮಹತ್ಕಾರ್ಯದಲ್ಲಿ ಜಿಲ್ಲಾಡಳಿತ, ಕ.ಸಾ.ಪ, ಮ.ನ.ಪಾ, ಜನ ಪ್ರತಿನಿಧಿಗಳು, ತುಳು ಸಂಘ ಸಂಸ್ಥೆಗಳು ಹಾಗೂ ತುಳು ಭಾಷಿಕರ ಸರ್ವ ಸಹಕಾರ ಅಗತ್ಯವಿದೆ ಎಂದು ಅವರು ವಿನಂತಿಸಿದ್ದಾರೆ.

ತುಳುವಿಗೆ ಆಕರ ಗ್ರಂಥವನ್ನು ನೀಡಿದ 'ಮಂದಾರ ರಾಮಾಯಣ'ಗ್ರಂಥದ ಕರ್ತೃ ಮಂದಾರ ಕೇಶವ ಭಟ್ಟರ ಜನ್ಮಶತಮಾನೋತ್ಸವ ಸಂದರ್ಭದಲ್ಲಿ ಈ ದುರಂತ ಸಂಭವಿಸಿರುವುದು ತುಳುನಾಡಿಗೆ ಬಂದಂತಹ ಘೋರ ದುರಂತ. ಮುಂದಿನ ಪೀಳಿಗೆಗಾಗಿ ಈ ಮಹಾಕವಿಯ ವಾಸ್ತು ವಿನ್ಯಾಸವುಳ್ಳ ಮನೆಯನ್ನು ಉಳಿಸಿ ಸುಂದರ ಸಾಂಸ್ಕೃತಿಕ ವೈಭವವನ್ನು ಎತ್ತಿ ಹಿಡಿದು, ತುಳು ಭಾಷೆ ಹಾಗೂ ಸಂಸ್ಕೃತಿಯ ಅಧ್ಯಯನ ಕೇಂದ್ರವನ್ನಾಗಿ ಮಾಡಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.