ETV Bharat / state

ಬೆಳ್ತಂಗಡಿ:ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ.. ಇಬ್ಬರ ಬಂಧನ - ಅಪ್ರಾಪ್ತೆ ಮೇಲೆ ಅತ್ಯಾಚಾರ

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಸಂಬಂಧ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

two-arrested-in-minor-girl-rape-case-in-beltangadi
ಬೆಳ್ತಂಗಡಿ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅಪ್ರಾಪ್ತೆ ಮೇಲೆ ಅತ್ಯಾಚಾರ... ಇಬ್ಬರ ಬಂಧನ
author img

By

Published : Oct 1, 2021, 7:44 AM IST

ಬೆಳ್ತಂಗಡಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಆಕೆ ಗರ್ಭಧರಿಸಲು ಕಾರಣರಾದ ಆರೋಪದ ಮೇಲೆ ಇಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಾಲಕಿ ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಜೆಸಿಬಿ ಚಾಲಕ ರವೀಂದ್ರ ಹಾಗೂ ಕೊಕ್ರಾಡಿಯ ಯೋಗೀಶ್ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಬೆಳ್ತಂಗಡಿ ತಾಲೂಕಿನ ಗ್ರಾಮವೊಂದರ 10ನೇ ತರಗತಿ ವಿದ್ಯಾರ್ಥಿನಿಯನ್ನು ಇವರಿಬ್ಬರು ಬಲತ್ಕಾರವಾಗಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಬಳಿಕ ಈ ವಿಚಾರವನ್ನು ಯಾರಿಗೂ ತಿಳಿಸದಂತೆ ಬೆದರಿಸಿದ್ದಾರೆ ಎಂದು ದೂರಲಾಗಿದೆ.

ಸೆ.27ರಂದು ಲಸಿಕೆ ಪಡೆಯುವಾಗ ಬಾಲಕಿಯ ದೇಹಸ್ಥಿತಿ ಗಮನಿಸಿದ ವೈದ್ಯರು, ಆಸ್ಪತ್ರೆಯಲ್ಲಿ ಪರೀಕ್ಷೆಗೊಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಅಲ್ಲಿಂದ ಆಕೆಗೆ ಮಂಗಳೂರಿನ ಆಸ್ಪತ್ರೆಗೆ ತೆರಳುವಂತೆ ಸೂಚಿಸಲಾಗಿದೆ. ಅದರಂತೆ ಆಸ್ಪತ್ರೆಗೆ ತೆರಳುವ ಮುನ್ನ ಬಾಲಕಿಯು ತನ್ನ ಮೇಲೆ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿಸಿದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ತನಗೆ ನ್ಯಾಯ ಒದಗಿಸಿಕೊಡಬೇಕಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಅಪ್ರಾಪ್ತೆಯು ನೀಡಿದ ದೂರಿನನ್ವಯ ಬೆಳ್ತಂಗಡಿ ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 2012 ಮತ್ತು ಕಲಂ 376 ಜೊತೆಗೆ 34 ಐಪಿಸಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಗ್ಯಾಂಗ್​ರೇಪ್​: ಬಲವಂತದ ಗರ್ಭಪಾತದ ವೇಳೆ ದುರ್ಮರಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.