ಸುಳ್ಯ(ದಕ್ಷಿಣ ಕನ್ನಡ): ಅಕ್ರಮವಾಗಿ ಅರಣ್ಯದೊಳಗೆ ನುಗ್ಗಿ ಕಡವೆಯನ್ನು ಬೇಟೆಯಾಡಿದ ಇಬ್ಬರನ್ನು ಮಾಂಸ ಸಹಿತ ಸಂಪಾಜೆ ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಸುಳ್ಯ ತಾಲೂಕು ದಬ್ಬಡ್ಕ ಗ್ರಾಮ ನಿವಾಸಿಗಳಾದ ಕೃಷ್ಣಪ್ಪ, ಪುರುಷೋತ್ತಮ ಕೆ.ಎಸ್ ಬಂಧಿತ ಆರೋಪಿಗಳು. ಬಂಧಿತರಿಂದ 100 ಕೆ.ಜಿ ಕಡವೆ ಮಾಂಸ, ಕೃತ್ಯಕ್ಕೆ ಬಳಸಿದ ಕತ್ತಿ, ಟಾರ್ಪಲ್ ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ದ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ ಹಾಗೂ ಸಂಪಾಜೆ ವಲಯ ಅರಣ್ಯಾಧಿಕಾರಿ ಮಧುಸೂದನ್ ಎಂ.ಕೆ. ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿದ್ದ ವೇಳೆ ಆರೋಪಿಗಳು ಸಿಕ್ಕಿ ಬಿದ್ದಿದ್ದಾರೆ.
ಇದನ್ನೂ ಓದಿ: ಜಿಂಕೆ ಮಾಂಸ ಪಾಲು ಮಾಡುತ್ತಿದ್ದ ಐವರು ಬೇಟೆಗಾರರು ಜೈಲುಪಾಲು