ಸುಳ್ಯ(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಬಂಧಿತರಾದವರ ಸಂಖ್ಯೆ ಆರಕ್ಕೆ ಏರಿದೆ.
ಬಂಧಿತ ಆರೋಪಿಗಳನ್ನು ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ (28) ಹಾಗೂ ಸುಳ್ಯ ನಾವೂರು ನಿವಾಸಿ ಆಬಿದ್ (22) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಒಟ್ಟು ಆರು ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಎಲ್ಲಾ ಆರೋಪಿಗಳನ್ನು ಗುರುತಿಸಲಾಗಿದೆ. ಉಳಿದ ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ ಎಂದು ಎಸ್ಪಿ ಋಷಿಕೇಶ ಸೋನವಾಣೆ ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 27ರಂದು ಶಫೀಕ್ ಹಾಗೂ ಝಾಕಿರ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ಬಳಿಕ ಆಗಸ್ಟ್ 2ರಂದು ಬೆಳ್ಳಾರೆ ನಿವಾಸಿ ಪಲ್ಲಿಮಜಲು ನಿವಾಸಿಗಳಾದ ಸದ್ದಾಂ(32) ಹಾಗೂ ಹ್ಯಾರಿಸ್ (42) ಎಂಬುವರನ್ನು ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಶಫೀಕ್ಗೆ ನ್ಯಾಯಾಂಗ ಬಂಧನ