ETV Bharat / state

ಸುಬ್ರಮಣ್ಯ ಸಮೀಪ ಹೊಳೆ ನೀರಲ್ಲಿ ಮುಳುಗಿ ಇಬ್ಬರು ಸಾವು - ಸುಬ್ರಮಣ್ಯ ಸಮೀಪ ಹೊಳೆ ನೀರಲ್ಲಿ ಮುಳುಗಿ ಇಬ್ಬರು ಸಾವು

ಹೊಳೆ ನೀರಲ್ಲಿ ಮುಳುಗಿ ಇಬ್ಬರು ಸಾವು. ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯ ಸಮೀಪ ಘಟನೆ.

representative image
ಸಾಂದರ್ಭಿಕ ಚಿತ್ರ
author img

By

Published : Nov 16, 2022, 11:34 AM IST

ಸುಬ್ರಮಣ್ಯ(ದಕ್ಷಿಣ ಕನ್ನಡ): ಸುಬ್ರಮಣ್ಯ ಸಮೀಪದ ಯೇನೆಕಲ್ಲಿನ ಮುಖ್ಯರಸ್ತೆಯ ಸೇತುವೆಯ ಕೆಳಭಾಗದಲ್ಲಿ ಹೊಳೆ ನೀರಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ. ಧರ್ಮಪಾಲ ಪರಮಲೆ (46) ಹಾಗೂ ಚೊಕ್ಕಾಡಿಯ ಬೆಳ್ಯಪ್ಪ(49) ಮೃತರು. ಧರ್ಮಪಾಲ ಎಂಬವರು ಕೆಲವು ಸಮಯಗಳಿಂದ ಸುಬ್ರಹ್ಮಣ್ಯದ ಗ್ರಾ.ಪಂ.ನಲ್ಲಿ ಕಸ ವಿಲೇವಾರಿ ಘಟಕದಲ್ಲಿ ದಿನಕೂಲಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಹೊಳೆಯಲ್ಲಿದ್ದ ಪಂಪಿನ ಫೂಟ್‌ವಾಲ್ ತೆಗೆಯಲು ನೀರಿಗಿಳಿದಾಗ ಆಕಸ್ಮಿಕವಾಗಿ ಕಾಲು ಜಾರಿ ನೀರಿನಲ್ಲಿ‌ ಮುಳುಗಿರಬಹುದೆಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಇಬ್ಬರ ಮೃತದೇಹಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

ಇದನ್ನೂ ಓದಿ: ಸುಳ್ಯದಲ್ಲಿ ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಗಾಯಾಳು ಚಾಲಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.