ETV Bharat / state

ಪುತ್ತೂರು: ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವು

ಅರ್ಲಪದವು ಸಮೀಪ ಕಡಮ್ಮಾಜೆಯಲ್ಲಿ ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ನಡೆದಿದೆ.

ಮಣ್ಣಿನಡಿ ಸಿಲುಕಿದ ಕಾರ್ಮಿಕರು
Two workers stuck in mud at Putturu
author img

By

Published : Mar 4, 2021, 12:03 PM IST

Updated : Mar 4, 2021, 2:49 PM IST

ಪುತ್ತೂರು: ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಅರ್ಲಪದವು ಸಮೀಪ ಕಡಮ್ಮಾಜೆಯಲ್ಲಿ ನಡೆದಿದೆ.

ಮಣ್ಣಿನಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಣೆ ಮಾಡುತ್ತಿರುವುದು

ಬಾಬು, ರವಿ ಮೃತ ಕೂಲಿ ಕಾರ್ಮಿಕರು. ಇವರು ಪಾರ್ಪಳ್ಳ ನಿವಾಸಿಗಳಾಗಿದ್ದಾರೆ. ಕಡಮ್ಮಾಜೆ ಹಾಜಿ ಅಬ್ದುಲ್ಲಾ ಎಂಬುವವರಿಗೆ ಸೇರಿದ ಕೋಳಿ ಫಾರ್ಮ್​ನ ತ್ಯಾಜ್ಯ ವಿಲೇವಾರಿಗೆ ಜೆಸಿಬಿ ಮೂಲಕ ಹೊಂಡ ತೆಗೆಯುವ ಕೆಲಸ ನಡೆಸಲಾಗುತ್ತಿತ್ತು. ಈ ವೇಳೆ ಕಾರ್ಮಿಕರು ಆಕಸ್ಮಿಕವಾಗಿ ಹೊಂಡದಲ್ಲಿ ಬಿದ್ದಿದ್ದರು. ಇದೇ ವೇಳೆ ಪಕ್ಕದಲ್ಲಿಯೇ ಜೆಸಿಬಿ ಯಂತ್ರ ಮಣ್ಣು ಅಗೆಯುತ್ತಿರುವುದಿಂದ ಮಣ್ಣು ಜರಿದು ಹೊಂಡದೊಳಗೆ ಬಿದ್ದಿತ್ತು. ಪರಿಣಾಮ ಕಾರ್ಮಿಕರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಮಣ್ಣಿನಡಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಸಾವು

ಮಣ್ಣಿನಡಿಯಲ್ಲಿ ಹೂತು ಹೋಗಿದ್ದ ಕಾರ್ಮಿಕರ ಮೃತದೇಹಗಳನ್ನು ಪುತ್ತೂರು ಅಗ್ನಿಶಾಮಕ ಸಿಬ್ಬಂದಿ ಹಾಗೂ ಸಂಪ್ಯ ಪೊಲೀಸರು ಕಾರ್ಯಾಚರಣೆ ನಡೆಸಿ ಹೊರ ತೆಗೆದಿದ್ದು, ಪುತ್ತೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

Last Updated : Mar 4, 2021, 2:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.