ETV Bharat / state

ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ - ಯು.ಎಸ್‌.ಮಲ್ಯ ಒಳಾಂಗಣ ಕ್ರೀಡಾಂಗಣ

ಯು.ಎಸ್‌.ಮಲ್ಯ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿ, ನೆಲಹಾಸುಗಳ ಕಾಮಗಾರಿಯನ್ನು 25 ಲಕ್ಷ ರೂ.ನಲ್ಲಿ ಅಭಿವೃದ್ಧಿ ಪಡಿಸಲಾಗಿದ್ದು ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ.

u s mallya indore stadium
ಯು.ಎಸ್‌.ಮಲ್ಯ ಒಳಾಂಗಣ ಕ್ರೀಡಾಂಗಣ
author img

By

Published : Jun 1, 2020, 11:40 PM IST

ಮಂಗಳೂರು: ನಗರದ ಯು.ಎಸ್‌.ಮಲ್ಯ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿ, ನೆಲಹಾಸುಗಳ ಕಾಮಗಾರಿ 25 ಲಕ್ಷ ರೂ.ನಲ್ಲಿ ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ ಮೇಲ್ಛಾವಣಿಗೆ ಪೈಂಟ್, ವುಡನ್ ಫ್ಲೋರಿಂಗ್‌ಗೆ ಫಾಲಿಶ್ ಸೇರಿದಂತೆ ವಿವಿಧ ಕಾಮಗಾರಿಗಳು ಪೂರ್ಣಗೊಂಡಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡಿಸಿಕೊಳ್ಳಬಹುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

u s mallya indore stadium
ಯು.ಎಸ್‌.ಮಲ್ಯ ಒಳಾಂಗಣ ಕ್ರೀಡಾಂಗಣ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ ವಾರ್ಡ್‌ನ ಯು.ಎಸ್.ಮಲ್ಯ ಒಳಾಂಗಣ ಕ್ರೀಡಾಂಗಣ ಸಂಕೀರ್ಣದಲ್ಲಿ ಸಂಪೂರ್ಣಗೊಂಡ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡುವ ಕ್ರೀಡಾಳುಗಳು ಕಳೆದ ವರ್ಷ ನನ್ನನ್ನು ಭೇಟಿ ಮಾಡಿ ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಮನವಿ ನೀಡಿದ್ದರು. ಹಾಗಾಗಿ ಇಲ್ಲಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿ ಅಭಿವೃದ್ಧಿಪಡಿಸುವ ಕುರಿತು ಭರವಸೆ ನೀಡಿದ್ದೆ. ಇದೀಗ ಕಾಮಗಾರಿ ಪೂರ್ಣಗೊಂಡಿದೆ ಎಂದು ಹೇಳಿದರು.

ಈ ಕ್ರೀಡಾಂಗಣದಲ್ಲಿ 500ಕ್ಕೂ ಅಧಿಕ ಕ್ರೀಡಾಳುಗಳು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ. ನಮ್ಮ ಕ್ಷೇತ್ರದಲ್ಲಿ ಕ್ರೀಡಾ ವಿಭಾಗಕ್ಕೆ ಒತ್ತು ನೀಡುವ ಸಲುವಾಗಿ ಕ್ರೀಡಾಂಗಣ, ಮೈದಾನಗಳ ಅಭಿವೃದ್ಧಿ ಕಾರ್ಯಗಳಿಗೆ ರೂಪುರೇಷೆ ಸಿದ್ಧಪಡಿಸಲಾಗಿದೆ. ಈಗಾಗಲೇ ಬಹುಮಹಡಿ ಕ್ರೀಡಾ ಕಟ್ಟಡದ ಯೋಜನೆಯ ಕುರಿತು ಮಾತುಕತೆ ನಡೆಯುತ್ತಿದ್ದು, ಅವೆಲ್ಲವೂ ಸಾಕಾರಗೊಂಡರೆ ಮಂಗಳೂರು ನಗರದಲ್ಲಿ ಕ್ರೀಡಾ ಪ್ರತಿಭೆಗಳಿಗೆ ಉತ್ತಮ ವೇದಿಕೆ ಒದಗಬಹುದು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಈ ಸಂದರ್ಭ ಬಿಜೆಪಿ ಮುಖಂಡರಾದ ಮೋಹನ್ ಆಚಾರ್, ವೆಂಕಟೇಶ್ ಆಚಾರ್, ಕೇಶವ ಪ್ರಭು, ಗೋಕುಲ್ ದಾಸ್ ಭಟ್, ಆನಂದ ರೈ, ಮಹೇಶ್ ಕುಂದರ್, ಅರ್ಷಾದ್ ಕುದ್ರೋಳಿ, ಮಂಗಳ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಿ.ಎಸ್.ಭಂಡಾರಿ ಹಾಗೂ ಪದಾಧಿಕಾರಿಗಳು ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.