ETV Bharat / state

ಉಜಿರೆ ಬಾಲಕನ ಅಪಹರಣ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಣೆ - ujire boy kidnapping accused bail Denied

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂರು ದಿನಗಳ ಒಳಗೆ ಕೋಲಾರದ ಮನೆಯೊಂದರಲ್ಲಿ ಬಾಲಕನನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ರಕ್ಷಿಸಿ, 6 ಮಂದಿ ಅಪಹರಣಕಾರರನ್ನು ಬಂಧಿಸಿದ್ದರು‌..

ujire boy kidnapping accused bail Denied by court
ಉಜಿರೆ ಬಾಲಕನ ಅಪಹರಣ ಪ್ರಕರಣದ ಆರೋಪಿಗಳಿಗೆ ಜಾಮೀನು ನಿರಾಕರಣೆ
author img

By

Published : Jan 27, 2021, 8:14 PM IST

ಮಂಗಳೂರು : ರಾಜ್ಯವನ್ನೇ ತಲ್ಲಣಗೊಳಿಸಿದ್ದ ಉಜಿರೆಯ ಬಾಲಕನ ಅಪಹರಣ ಪ್ರಕರಣದ ಆರೋಪಿಗಳಿಗೆ ದ.ಕ.ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಜಾಮೀನು ನಿರಾಕರಣೆ ಮಾಡಿ ಆದೇಶಿಸಿದ್ದಾರೆ.

ಪ್ರಕರಣದ ಹಿನ್ನೆಲೆ : ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿನ ಮನೆಯ ಮುಂದಿನ ರಸ್ತೆ ಬದಿಯಲ್ಲಿ ಆಡುತ್ತಿದ್ದ ಬಾಲಕ ಅನುಭವ್‌ನನ್ನು ಇಂಡಿಕಾ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಪಹರಿಸಿದ್ದರು.

ಬಳಿಕ ಬಾಲಕನ ಪೋಷಕರಿಗೆ ಕರೆ ಮಾಡಿ 17 ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಮೊತ್ತವನ್ನು ನಗದು ಅಥವಾ ಚೆಕ್ ಮೂಲಕ ನೀಡದೆ ಬಿಟ್ ಕಾಯಿನ್ ಮೂಲಕ ನೀಡುವಂತೆ ಅಪಹರಣಕಾರರು ಒತ್ತಾಯಿಸಿದ್ದರು.

ಓದಿ: ಉಜಿರೆಯ 8 ವರ್ಷದ ಬಾಲಕ ಕಿಡ್ನಾಪ್ ಕೇಸ್ ಸುಖಾಂತ್ಯ​: ಕೋಲಾರದಲ್ಲಿ ಅಪಹರಣಕಾರರ ಬಂಧನ

ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂರು ದಿನಗಳ ಒಳಗೆ ಕೋಲಾರದ ಮನೆಯೊಂದರಲ್ಲಿ ಬಾಲಕನನ್ನು ಪತ್ತೆ ಹಚ್ಚಿ ಸುರಕ್ಷಿತವಾಗಿ ರಕ್ಷಿಸಿ, 6 ಮಂದಿ ಅಪಹರಣಕಾರರನ್ನು ಬಂಧಿಸಿದ್ದರು‌.

ಇವರಲ್ಲಿ ಆರೋಪಿಗಳಾದ ಮಾಲೂರಿನ ಕೊರ್ನಹೊಸಳ್ಳಿಯ ಮಂಜುನಾಥ್ ಮತ್ತು ಮಹೇಶ್ ಜಾಮೀನು ಅರ್ಜಿ ಹಾಕಿದ್ದರು. ಆದರೆ, ನ್ಯಾಯಾಲಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.