ಮಂಗಳೂರು: ಮಾಜಿ ಸಚಿವ ಖಾದರ್ ವಿರುದ್ಧ ತಿರುಗಿ ಬಿದ್ದಿರುವ ಉಳ್ಳಾಲ ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿಯವರು 100 ಮಂದಿ ಕೈ ಕಾರ್ಯಕರ್ತರೊಂದಿಗೆ ಬಿಜೆಪಿ ಸೇರ್ಪಡೆಯಾಗುವ ನಿರ್ಧಾರ ಪ್ರಕಟಿಸಿದ್ದಾರೆ.
ಶನಿವಾರ ನಗರದ ಪ್ರೆಸ್ ಕ್ಲಬ್ನಲ್ಲಿ ಮಾತನಾಡಿದ ಅವರು, ಯು.ಟಿ. ಖಾದರ್ ಅತ್ಯಂತ ಭ್ರಷ್ಟ ರಾಜಕಾರಣಿ. ಅವರ ನಡವಳಿಕೆಯಿಂದ ನಾವೆಲ್ಲರೂ ಬೇಸತ್ತಿದ್ದೇವೆ. ಈ ಕಾರಣದಿಂದಾಗಿಯೇ ನಾವು ಕಾಂಗ್ರೆಸ್ ತೊರೆಯುವ ನಿರ್ಧಾರ ಕೈಗೊಂಡಿದ್ದು, 100 ಮಂದಿ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.
ಉಳ್ಳಾಲ ಕ್ಷೇತ್ರದಲ್ಲಿ ಇಷ್ಟು ವರ್ಷದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ. ಅಲ್ಪಸ್ವಲ್ಪ ಅನುದಾನದ ಮೂಲಕ ಕಾಮಗಾರಿ ನಡೆಸಿ ಬರೀ ಪೋಸ್ ಕೊಡಲಾಗುತ್ತಿದೆ. ಬರೀ ಮದುವೆ ಮುಂಜಿ, ಮಕ್ಕಳ ತೊಟ್ಟಿಲು ಹಾಕುವ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆಯೇ ಹೊರತು ಅಭಿವೃದ್ಧಿ ಕಾರ್ಯ ಯಾವುದೂ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಪಂಚರಾಜ್ಯಗಳಲ್ಲಿ ಸೋತು ಸುಣ್ಣವಾದ ಕಾಂಗ್ರೆಸ್.. ನಾಳೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ