ಮಂಗಳೂರು: ದೇವಸ್ಥಾನ ಅಭಿವೃದ್ಧಿ ಹೊಂದಿದರೆ ಇಡೀ ಗ್ರಾಮವೇ ಅಭಿವೃದ್ಧಿ ಹೊಂದಿದ ಅನುಭವ ನಮ್ಮ ಮನಸ್ಸಿನಲ್ಲಿ ಮೂಡುತ್ತದೆ ಎಂದು ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಇಂದು ಅವರು ಮಧ್ಯ ಶ್ರೀ ಖಡ್ಗೇಶ್ವರ, ಖಡ್ಗೇಶ್ವರಿ ದೇವಸ್ಥಾನದಲ್ಲಿ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಮತ್ತು ದೇವಸ್ಥಾನ ಹಾಗೂ ದಾನಿಗಳ ಸಹಕಾರದಿಂದ ಸುಮಾರು 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮೂಲಭೂತ ಸೌಕರ್ಯಗಳಿಗೆ ಪ್ರಥಮ ಆದ್ಯತೆ ನೀಡುತ್ತಿದ್ದು, ಈ ನಿಟ್ಟಿನಲ್ಲಿ ಚೇಳೈರು ಮಧ್ಯ ಗ್ರಾಮ ಪಂಚಾಯತ್ನಲ್ಲಿ ಸುಮಾರು 3 ಕೋಟಿಗಳ ಅಭಿವೃದ್ಧಿ ಕಾಮಗಾರಿ ಎರಡು ವರ್ಷಗಳಲ್ಲಿ ಅಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ನಡೆಯಲಿದ್ದು, ಗ್ರಾಮಸ್ಥರ ಸಹಕಾರ ಅಗತ್ಯ ಎಂದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಚೇಳೈರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಜಯಾನಂದ ಚೇಳೈರು, ಪುಷ್ಪರಾಜ್ ಶೆಟ್ಟಿ ಮಧ್ಯ, ಮಾಜಿ ಸದಸ್ಯರಾದ ದಿನೇಶ್ ದೇವಾಡಿಗ, ಬಾಲಕೃಷ್ಣ ಶೆಟ್ಟಿ, ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರುಗಳಾದ ಶಂಕರ ಹೆಗಡೆ, ಬೋಜ ಅಂಚನ್, ಕೃಷ್ಣಮೂರ್ತಿ ಭಟ್, ಬಿಜೆಪಿ ಯುವ ಮೋರ್ಚಾ ಸದಸ್ಯ ಪವನ್ ಕುಮಾರ್, ಲಕ್ಷಿನಾರಾಯಣ ಶೆಟ್ಟಿ, ಬಾಬು ದೇವಾಡಿಗ, ಭುಜಂಗ ಶೆಟ್ಟಿ, ಜಗದೀಶ್ ಶೆಟ್ಟಿ, ಜನಾರ್ದನ ಶೆಟ್ಟಿ ಮತ್ತಿತ್ತರು ಉಪಸ್ಥಿತರಿದ್ದರು.