ಮಂಗಳೂರು :ನಗರದ ಪಚ್ಚನಾಡಿ ತ್ಯಾಜ್ಯ ರಾಶಿಯಲ್ಲಿ ಬೆಳಗ್ಗೆ 7 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಜೆಸಿಬಿ ಸಹಾಯದಿಂದ ಮಣ್ಣು ಹಾಕುವ ಮೂಲಕ ಬೆಂಕಿಯನ್ನು ನಂದಿಸಲಾಯಿತು.
ಬೇಸಿಗೆ ಕಾಲದಲ್ಲಿ ಪಚ್ಚನಾಡಿ ತ್ಯಾಜ್ಯರಾಶಿಯಲ್ಲಿ ಆಗಾಗ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಪ್ರಸ್ತುತ ಬೇಸಿಗೆಯಲ್ಲಿ ಇದು ಮೊದಲ ಪ್ರಕರಣವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಎರಡು ಮೂರು ಸಲ ಬೆಂಕಿ ಕಾಣಿಸಿಕೊಂಡಿತ್ತು. ತ್ಯಾಜ್ಯದಲ್ಲಿ ಸೇರಿರುವ ರಾಸಾಯನಿಕ ಪದಾರ್ಥದಿಂದ ತಾಪಮಾನ ಏರಿಕೆಯಿಂದಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ ಎಂದು ಮೂಲಗಳು ತಿಳಿಸಿವೆ.