ETV Bharat / state

ಮಂಗಳೂರು ವಿವಿಯಲ್ಲಿ ಗಣೇಶ ಚತುರ್ಥಿ ಆಚರಣೆಯ ಗೊಂದಲಕ್ಕೆ ತೆರೆ: ವಿವಾದ ಸುಖಾಂತ್ಯ - ಜಯರಾಜ್ ಅಮಿನ್

ಮಂಗಳೂರು ವಿವಿಯ ಮಂಗಳ ಸಭಾಂಗಣದಲ್ಲಿ ಗಣೇಶ ಚತುರ್ಥಿಯನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಕುಲಪತಿಗಳಾದ ಪ್ರೋ. ಜಯರಾಜ್ ಅಮಿನ್ ತಿಳಿಸಿದ್ದಾರೆ.

ಮಂಗಳೂರು ವಿವಿ
ಮಂಗಳೂರು ವಿವಿ
author img

By ETV Bharat Karnataka Team

Published : Sep 14, 2023, 3:55 PM IST

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶ ಚತುರ್ಥಿ ಮಾಡುವ ವಿಚಾರದಲ್ಲಿ ಎದ್ದಿರುವ ವಿವಾದ ಸುಖಾಂತ್ಯ ಕಂಡಿದೆ. ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಕಳೆದ ಕೆಲ ವರ್ಷಗಳಿಂದ ಗಣೇಶ ಚತುರ್ಥಿ ಆಚರಣೆ ಮಾಡಲಾಗುತ್ತಿತ್ತು. ಅದಕ್ಕೂ ಹಿಂದೆ ವಿಶ್ವವಿದ್ಯಾನಿಲಯದ ಪುರುಷರ ಹಾಸ್ಟೆಲ್​ನಲ್ಲಿ ಆಚರಣೆ ಮಾಡಲಾಗುತ್ತಿತ್ತು. ಆದರೆ, ಈ ಬಾರಿ ಮಂಗಳಾ ಸಭಾಂಗಣದಲ್ಲಿ ಗಣೇಶ ಚತುರ್ಥಿ ಆಚರಣೆ ಮಾಡಲು ಅವಕಾಶವಿರುವುದಿಲ್ಲ ಎಂಬ ಕುಲಪತಿಗಳ ನಿರ್ಧಾರದಿಂದ ಅಸಮಾಧಾನ ಭುಗಿಲೆದ್ದಿತ್ತು.

ಆರಂಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಕುಲಪತಿಗಳಲ್ಲಿ ಈ ಬಗ್ಗೆ ಚರ್ಚಿಸಿ ಮಂಗಳ ಸಭಾಂಗಣದಲ್ಲಿಯೇ ಗಣೇಶ ಚತುರ್ಥಿ ಮಾಡಬೇಕು ಮತ್ತು ಎರಡು ಲಕ್ಷ ರೂಗಳನ್ನು ವಿಶ್ವವಿದ್ಯಾನಿಲಯದ ವತಿಯಿಂದ ನೀಡಬೇಕು ಎಂದು ಆಗ್ರಹಿಸಿದ್ದರು. ಈ ಬಗ್ಗೆ ಕುಲಪತಿಗಳು ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಶಾಸಕ ವೇದವ್ಯಾಸ ಕಾಮತ್ ಎರಡು ಗಂಟೆಗಳ ಕಾಲ ಕಚೇರಿಯಲ್ಲಿ ಕುಳಿತು ಮಂಗಳ ಸಭಾಂಗಣದಲ್ಲಿ ಗಣೇಶ ಚತುರ್ಥಿ ಮಾಡುವಂತೆ ಬೆದರಿಸಿದ್ದರು ಎಂದು ಪತ್ರ ಬರೆದು ಈ ಬಗ್ಗೆ ಸಲಹೆ ಸೂಚನೆ ನೀಡುವಂತೆ ತಿಳಿಸಿದ್ದರು.

ಆ ಬಳಿಕ ಕುಲಪತಿಗಳು ಪ್ರಕಟಣೆ ಹೊರಡಿಸಿ, ಈ ಬಾರಿಯ ಗಣೇಶ ಚತುರ್ಥಿಯನ್ನು ಈ ಹಿಂದೆ ನಡೆಯುತ್ತಿದ್ದ ಪುರುಷರ ಹಾಸ್ಟೆಲ್​ನಲ್ಲಿ ನಡೆಸಲಾಗುವುದು ಎಂದು ತಿಳಿಸಿದ್ದರು. ಆದರೂ ಇದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ಅವರು, ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶ ಚತುರ್ಥಿ ಮಾಡುವ ವಿಚಾರದಲ್ಲಿ ಹೊರಗಿನವರು ಬರುವುದು ಬೇಡ. ಅದು ಕುಲಪತಿಗಳು ನಿರ್ಧರಿಸಲಿ ಎಂದು ತಿಳಿಸಿದ್ದರು.

ಆನಂತರದಲ್ಲಿ ಮಂಗಳೂರಿನ ಅಸೈಗೋಳಿಯಲ್ಲಿ ಪ್ರತಿಭಟನೆ ನಡೆಸಿದ ಹಿಂದೂ ಸಂಘಟನೆ ಕಾರ್ಯಕರ್ತರು ಗಣೇಶ ಚತುರ್ಥಿಯನ್ನು ಮಂಗಳ ಸಭಾಂಗಣದಲ್ಲಿ ನಡೆಸುವಂತೆ ಆಗ್ರಹಿಸಿದ್ದರು. ಈ ಪ್ರತಿಭಟನೆಯಲ್ಲಿ ಮಾತನಾಡಿದ್ದ ಆರ್​ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಗಣೇಶ ಚತುರ್ಥಿ ಮಾಡಿಯೇ ಸಿದ್ದ. ನಾವು ಅಲ್ಲಿಗೆ ಹೋಗುತ್ತೇವೆ. ಸಾಧ್ಯವಿದ್ದರೆ ತಡೆಯಲಿ ಎಂದು ಸವಾಲು ಹಾಕಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಗಣೇಶ ಚತುರ್ಥಿ ಆಚರಣೆಯ ವಿಚಾರವು ಗೊಂದಲಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಇದೀಗ ಕುಲಪತಿಗಳಾದ ಪ್ರೊ. ಜಯರಾಜ್ ಅಮೀನ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶ ಚತುರ್ಥಿ ಆಚರಿಸಲು ಅನುಮತಿ ನೀಡಿದ್ದಾರೆ.

ಈಟಿವಿ ಭಾರತ್​ ಜೊತೆಗೆ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ, ಪ್ರೊ ಜಯರಾಜ್ ಅಮಿನ್ ಅವರು, ಗಣೇಶ ಚತುರ್ಥಿ ಆಚರಣೆಯನ್ನು ಮಂಗಳ ಸಭಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಗಲುವ ವೆಚ್ಚವನ್ನು ವಿಶ್ವವಿದ್ಯಾನಿಲಯದ ಬೇರೆ ಬೇರೆ ಮೂಲಗಳಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಂಗಳೂರಿನಲ್ಲಿ 94 ವರ್ಷದಿಂದ ಗಣಪತಿ ತಯಾರಿಸುತ್ತಿರುವ ಕುಟುಂಬ.. ಅಮೆರಿಕಕ್ಕೂ ರವಾನೆಯಾಗುತ್ತೆ ಇಲ್ಲಿನ ಮೂರ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.