ಬಂಟ್ವಾಳ: ಇಲ್ಲಿನ ಜೈನ ಪೇಟೆಯಲ್ಲಿನ ನೇತ್ರಾವತಿ ಸೇತುವೆಯ ಕೆಳಗಡೆ ನದಿಯಲ್ಲಿ ಸುಮಾರು 60 ರಿಂದ 70 ವಯಸ್ಸಿನ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಮೃತವ್ಯಕ್ತಿಯು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿರಬಹುದು ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.