ಉಳ್ಳಾಲ: ಅಪರಿಚಿತ ತಂಡವೊಂದು ಯುವಕನಿಗೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಧರ್ಮನಗರದಲ್ಲಿ ಇಂದು ಸಂಜೆ ನಡೆದಿದೆ. ಗುರುವಾರ ತೊಕ್ಕೊಟ್ಟು ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.
ಧರ್ಮನಗರ ನಿವಾಸಿ ದಿವಾಕರ ಆಚಾರ್ಯ ಹಲ್ಲೆಗೊಳಗಾದವರು. ರಸ್ತೆ ಬದಿಯಲ್ಲಿ ನಿಂತಿದ್ದ ದಿವಾಕರ್ ಅವರ ಮೇಲೆ ಬೈಕಿನಲ್ಲಿ ಬಂದ ತಂಡ ಯದ್ವಾ ತದ್ವಾ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ದಿವಾಕರ್ ಅವರನ್ನು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.