ಮಂಗಳೂರು : ಮನೆಯೊಂದರಲ್ಲಿ ದುಷ್ಕರ್ಮಿಗಳು ವ್ಯಕ್ತಿಯೋರ್ವನನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ತೊಕ್ಕೊಟ್ಟುವಿನ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ನಾರಾಯಣ (46) ಕೊಲೆಯಾದ ವ್ಯಕ್ತಿ. ಈತ ಭಾವಮೈದ ರಾಜೇಶ್ ಎಂಬಾತನಿಂದಲೆ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗುತ್ತಿದ್ದು, ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸ್ ಠಾಣಾ ಅಧಿಕಾರಿ ಗೋಪಿಕೃಷ್ಣ , ಪಿಎಸ್ಐ ಗುರುಕಾಂತಿ ಭೇಟಿ ನೀಡಿದ್ದಾರೆ.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.