ಮಂಗಳೂರು: ಉನ್ನಾವೋ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮೊಂಬತ್ತಿ ಉರಿಸಿ ಪ್ರತಿಭಟನೆ ನಡೆಸಿದರು.
ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಮಂಗಳವಾರದಂದು ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಉನ್ನಾವೋದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಯುವತಿಯ ನ್ಯಾಯಕ್ಕಾಗಿ ಆಗ್ರಹಿಸಿದರು. ಈ ವೇಳೆ ಮಾತನಾಡಿದ ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಉನ್ನಾವೋ ಅತ್ಯಾಚಾರಿಗಳಿಗೆ ತೆಲಂಗಾಣದ ಅತ್ಯಾಚಾರಿ ಆರೋಪಿಗಳಿಗೆ ನೀಡಿದಂತೆ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದರು. ಉತ್ತರ ಪ್ರದೇಶದಲ್ಲಿ ಸರ್ಕಾರ ಉನ್ನಾವೋ ಅತ್ಯಾಚಾರಕ್ಕೊಳಗಾದ ಯುವತಿಯ ನೆರವಿಗೆ ಬಾರದೆ ಆಕೆ ಸಾವನ್ನಪ್ಪುವಂತಾಯಿತು ಎಂದು ಆಕ್ರೋಶ ವ್ಯಕ್ತಪಡಿಸಿದರು.