ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ತುಳು ಸಂಸ್ಕೃತಿಯನ್ನು ಬಿಂಬಿಸುವ ಹಲಸಿನ ಹಣ್ಣಿನ ವೈವಿಧ್ಯಗಳನ್ನು ತಯಾರಿಸುವ ಉಪ್ಪಡ್ ಪಚ್ಚಿಲ್ ಆಯನೊ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಿವೇಕಾನಂದ ವಿದ್ಯಾಕೇಂದ್ರ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹಲಸಿನ ಹಣ್ಣನ್ನು ತುಂಡರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷರಾದ ನಾರಾಯಣ ಗೌಡ, ಆಡಳಿತ ಮಂಡಳಿ ಸದಸ್ಯರಾದ ಆರ್. ಚೆನ್ನಪ್ಪ ಕೊಟ್ಯಾನ್, ರಾಷ್ಟ್ರಸೇವಿಕಾ ಸಮಿತಿಯ ಪ್ರಾಂತ ಕಾರ್ಯಕಾರಿಣಿ ಸದಸ್ಯೆ ಡಾ. ಕಮಲಾ ಪ್ರಭಾಕರ ಭಟ್ ಇತರರು ಭಾಗವಹಿಸಿದ್ದರು.