ETV Bharat / state

ಮುಜರಾಯಿ ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಿಸಿದ ಮೇಲ್ವರ್ಗದವರು - ಈಟಿವಿ ಭಾರತ ಕನ್ನಡ

ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಪ್ರವೇಶಿಸಲು ದಲಿತ ವ್ಯಕ್ತಿಯೊಬ್ಬರಿಗೆ ಮೇಲ್ವರ್ಗದವರು ನಿರಾಕರಿಸಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ.

Dalits denied entry to temple in devanahalli
ಮುಜರಾಯಿ ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಿಸಿದ ಮೇಲ್ವರ್ಗದವರು
author img

By

Published : Nov 23, 2022, 8:12 PM IST

ದೇವನಹಳ್ಳಿ : ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಪ್ರವೇಶಿಸಲು ದಲಿತ ವ್ಯಕ್ತಿಯೊಬ್ಬರಿಗೆ ಮೇಲ್ವರ್ಗದವರು ನಿರಾಕರಿಸಿರುವ ಆರೋಪ ದೇವನಹಳ್ಳಿಯಲ್ಲಿ ಕೇಳಿಬಂದಿದೆ. ಈ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಸೌಹಾರ್ದ ಸಭೆ ನಡೆಸಿ ಜಾಗೃತಿ ಮೂಡಿಸಿದ್ದಾರೆ.

ದೇವನಹಳ್ಳಿ ತಾಲೂಕಿನ ಶಾನಪ್ಪನಹಳ್ಳಿ ಚನ್ನಕೇಶವ ಸ್ವಾಮಿ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ್ದು, ಕಡೆ ಕಾರ್ತಿಕ ಸೋಮವಾರದಂದು ದಲಿತ ಸಮುದಾಯದವರಾದ ಸೋಲೂರಿನ ಮಂಜುನಾಥ್ ಎಂಬವರು ಸಂಜೆ 7:30ಕ್ಕೆ ದೇವಸ್ಥಾನಕ್ಕೆ ಹೋಗಿದ್ದಾರೆ. ಈ ವೇಳೆ, ಗ್ರಾಮದ ಮೇಲ್ವರ್ಗಕ್ಕೆ ಸೇರಿದ ಮಹಿಳೆಯರು ಹಾಗೂ ಚನ್ನಕೇಶವ ಮತ್ತು ಕೆಂಪಣ್ಣ ಎಂಬುವವರು ಮಂಜುನಾಥ ಅವರನ್ನು ತಡೆದಿದ್ದಾರೆ. ನಮ್ಮ ಗ್ರಾಮದ ದೇವಸ್ಥಾನಕ್ಕೆ ಹಿಂದಿನಿಂದಲೂ ನಿಮ್ಮ ಜಾತಿಯವರಿಗೆ ಬರಬಾರದೆಂದು ಎಚ್ಚರಿಕೆ ನೀಡಲಾಗಿದೆ ಎಂದು ಮಂಜುನಾಥ್​ ಅವರಿಗೆ ತಾಕೀತು ಮಾಡಿದ್ದಾರೆ.

ಈ ಘಟನೆ ಬಗ್ಗೆ ತಿಳಿದ ತಹಶೀಲ್ದಾರ್ ಶಿವರಾಜ್ ಸ್ಥಳಕ್ಕೆ ಆಗಮಿಸಿ ಪೊಲೀಸರು, ಸಮಾಜ ಕಲ್ಯಾಣಾಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ಸೌಹಾರ್ದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮೇಲ್ವರ್ಗದ ಸಮುದಾಯ ಹಾಗೂ ದಲಿತ ಸಂಘಟನೆ ಮುಖಂಡರ ಜತೆ ಮಾತುಕತೆ ನಡೆಸಿ, ಅಸ್ಪೃಶ್ಯತೆ ವಿರುದ್ಧ ಜಾಗೃತಿ ಮೂಡಿಸಿ ತಿಳಿವಳಿಕೆ ಹೇಳಿದ್ದಾರೆ.

ಇದನ್ನೂ ಓದಿ : ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದಿದ್ದಕ್ಕೇ ಟ್ಯಾಂಕ್ ಖಾಲಿ ಮಾಡಿಸಿ ಸ್ವಚ್ಛಗೊಳಿಸಿದ್ರಾ!?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.