ETV Bharat / state

ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್: ಕರಾವಳಿ ರಾಜಕಾರಣಿಯ ರಾಜಕೀಯ ಹಾದಿ.. - Etv Bharat Kannada

ವಿಧಾನಸಭೆ ನೂತನ ಸ್ಪೀಕರ್​ ಆಗಿ ಆಯ್ಕೆಯಾಗಿರುವ ಯು.ಟಿ.ಖಾದರ್​ ಅವರ ವಿದ್ಯಾಭ್ಯಾಸ, ರಾಜಕೀಯ ಸಾಧನೆಯ ಕುರಿತಾದ ಮಾಹಿತಿ ಇಲ್ಲಿದೆ.

ಯು ಟಿ ಖಾದರ್
ಯು ಟಿ ಖಾದರ್
author img

By

Published : May 23, 2023, 11:35 AM IST

ಮಂಗಳೂರು: ರಾಜ್ಯ ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಶಾಸಕ ಯು‌.ಟಿ.ಖಾದರ್ ಆಯ್ಕೆ ಬಹುತೇಕ ಖಚಿತವಾಗಿದೆ. ಮಂಗಳೂರು ವಿಧಾನಸಭಾ ಕ್ಷೇತ್ರ ಪ್ರತಿನಿಧಿಸುವ ಖಾದರ್​ ಕಾಂಗ್ರೆಸ್​ನಿಂದ ಸ್ಪರ್ಧೆ ಮಾಡಿ ಒಟ್ಟು 5 ಬಾರಿ‌ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. ಈ ಹಿಂದೆ ಸಚಿವರಾಗಿ, ವಿಪಕ್ಷ ಉಪನಾಯಕರಾಗಿಯೂ ಸೇವೆ ಸಲ್ಲಿಸಿರುವ ಇವರಿಗೆ ಇದೀಗ ವಿಧಾನಸಭಾ ಸ್ಪೀಕರ್ ಹುದ್ದೆ ಲಭಿಸುತ್ತಿದೆ.

ವಿದ್ಯಾರ್ಹತೆ: ಯು.ಟಿ.ಅಬ್ದುಲ್ ಖಾದರ್ ಅಲಿ ಫರೀದ್ ಅವರು ಬಿಎ, ಎಲ್​ಎಲ್​ಬಿ ವ್ಯಾಸಂಗ ಮಾಡಿದ್ದಾರೆ. ತಂದೆ ಯು.ಟಿ.ಫರೀದ್ ಅವರು ಕೂಡ ಬಿಎ, ಎಲ್​ಎಲ್​ಬಿ ವ್ಯಾಸಂಗ ಮಾಡಿದ್ದರು. ಫರೀದ್​ ಖಾದರ್​ 1972, 1978, 1999, 2004 ರಲ್ಲಿ ಒಟ್ಟು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಯು.ಟಿ.ಖಾದರ್ ಅವರು 1969 ಅಕ್ಟೋಬರ್ 12 ರಂದು ಮಂಗಳೂರಿನಲ್ಲಿ ಯು.ಟಿ.ಫರೀದ್​ ಖಾದರ್, ಯು.ಟಿ.ನಸೀಮಾ ಫರೀದ್ ದಂಪತಿಗೆ ಜನಿಸಿದ್ದರು. ಯು.ಟಿ.ಖಾದರ್ ಅವರು ತನ್ನ ಬಾಲ್ಯದ ಶಿಕ್ಷಣವನ್ನು ರೋಶನಿ ನಿಲಯ, ಒಂದರಿಂದ ನಾಲ್ಕನೇ ತರಗತಿಯನ್ನು ಸೈಂಟ್ ಜೆರೋಝ, ನಾಲ್ಕನೇ ತರಗತಿಯಿಂದ ಪ್ರೌಢ ಶಿಕ್ಷಣವನ್ನು ಸೈಂಟ್ ಅಲೋಶಿಯಸ್​​ನಲ್ಲಿ, ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದಿರೆಯ ಮಹಾವೀರ ಕಾಲೇಜಿನಲ್ಲಿ ಕಲಿತು ನಂತರ ಎಸ್​ಡಿಎಮ್​ ಕಾಲೇಜಿನಲ್ಲಿ ಬಿಎ, ಎಲ್​ಎಲ್​ಬಿ ಪದವಿ ಶಿಕ್ಷಣ ಮುಗಿಸಿದರು.

ಹವ್ಯಾಸಗಳು: ರಾಜಕೀಯ ಮಾತ್ರವಲ್ಲದೆ ಬೈಕ್ ಹಾಗೂ ಕಾರ್ ರೇಸ್​ನಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಯು.ಟಿ.ಖಾದರ್ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಮೋಟೋ ರೇಸ್ ಚಾಂಪಿಯನ್‌ಶಿಪ್​ನಲ್ಲಿ ಭಾಗವಹಿಸಿದ್ದರು. ಕ್ರೀಡೆಯಲ್ಲಿ ಕೂಡ ಆಸಕ್ತಿ ಹೊಂದಿದ್ದು ಬಾಲ್ಯದಲ್ಲಿ ಕ್ರಿಕೆಟ್, ಫುಟ್ಬಾಲ್, ವಾಲಿಬಾಲ್, ಹಾಕಿ, ಟೆನ್ನಿಸ್ ಹಾಗೂ ಇತರ ಕ್ರೀಡೆಗಳನ್ನು ಆಡುತ್ತಿದ್ದರು.

ರಾಜಕೀಯ ಪಯಣ: ಬಾಲ್ಯದಿಂದಲೂ ರಾಜಕೀಯದಲ್ಲಿ ಒಲವು ಹೊಂದಿದ್ದ ಯು.ಟಿ.ಖಾದರ್, 1990ರಲ್ಲಿ NSUI ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, 1994 ರಿಂದ 1999ರ ವರೆಗೆ NSUI ಜಿಲ್ಲಾಧ್ಯಕ್ಷರಾಗಿ, 1999 ರಿಂದ 2001ರ ವರೆಗೆ NSUI ರಾಜ್ಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. 2003 ರಲ್ಲಿ ಘಟಪ್ರಭದಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ, 2004 ರಲ್ಲಿ ಹಿಮಾಚಲ ಪ್ರದೇಶದ ಕಂದಘಾಟ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ಸೇವಾದಳ ತರಬೇತಿ ಶಿಬಿರದಲ್ಲಿ ಭಾಗವಹಿಸಿ 2005ರಲ್ಲಿ ಸೇವಾದಳದ ಹೆಚ್ಚುವರಿ ಮುಖ್ಯ ಸಲಹೆಗಾರರಾಗಿ ಆಯ್ಕೆಯಾಗಿದ್ದರು.

2007 ರಲ್ಲಿ ತಮ್ಮ ತಂದೆಯವರ ನಿಧನದಿಂದ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು, ಖಾದರ್ ಗೆಲುವು ದಾಖಲಿಸಿ​ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಆಯ್ಕೆಯಾದರು. ನಂತರ 2008, 2013, 2018 ಹಾಗೂ 2023 ರಲ್ಲಿ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ ತಾವು ಶಾಸಕರಾಗಿದ್ದ 2007 ರಿಂದ 2013 ರ ಅವಧಿಯ ವಿಧಾನಸಭೆಯ ಅತ್ಯುತ್ತಮ ಕಾರ್ಯ ವೈಖರಿಗಾಗಿ ಸದನ ವೀರ ಹಾಗೂ ಶೈನಿಂಗ್ ಇಂಡಿಯಾ ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಿತು.

2013 ರ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಆರೋಗ್ಯ ಸಚಿವರಾಗಿ 2016ರ ತನಕ ಸೇವೆ ಸಲ್ಲಿಸಿದ್ದಾರೆ. ಆರೋಗ್ಯ ಸಚಿವರಾದ ಅವಧಿಯಲ್ಲಿ ರಾಜ್ಯದಲ್ಲಿ ಗುಟ್ಕಾ ನಿಷೇಧ, ಬೈಕ್ ಆಂಬ್ಯುಲೆನ್ಸ್, 108, ಆರೋಗ್ಯ ಶ್ರೀ, ದಂತ ಭಾಗ್ಯ, ಸರಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಡಯಾಲಿಸಿಸ್ ಘಟಕ, ಹರೀಶ್ ಸಾಂತ್ವನ ಯೋಜನೆ ಮುಂತಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೆ ತಂದರು. ಇವರ ಕಾರ್ಯ ವೈಖರಿಗೆ ಕೇಂದ್ರ ಸರಕಾರ ಉತ್ತಮ ಆರೋಗ್ಯ ಸಚಿವ ಪ್ರಶಸ್ತಿ ನೀಡಿ ಸನ್ಮಾನಿಸಿತು.

2016 ರಿಂದ 2018ರ ತನಕ ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿ, ಬಡವರು ಪಡಿತರ ಚೀಟಿಗಾಗಿ ಸಲ್ಲಿಸಬೇಕಾಗಿದ್ದ 10 ರಿಂದ 13 ದಾಖಲೆಗಳನ್ನು ಕಡಿತಗೊಳಿಸಿ ಕೇವಲ ಆಧಾರ್ ಕಾರ್ಡ್ ಮೂಲಕ ಅರ್ಜಿ ಸಲ್ಲಿಸಿ ಮನೆ ಬಾಗಿಲಿಗೆ ರೇಷನ್ ಕಾರ್ಡ್ ತಲುಪಿಸುವ ಕ್ರಾಂತಿಕಾರಿ ಯೋಜನೆಗೆ ಚಾಲನೆ ನೀಡಿ ಇತಿಹಾಸ ಸೃಷ್ಟಿಸಿದರು. ಬಿಪಿಎಲ್ ಕಾರ್ಡ್​ ಪಡೆಯಲು ನಿಗದಿಪಡಿಸಿದ್ದ ಆದಾಯ ಮಿತಿಯನ್ನು ಕಡಿತಗೊಳಿಸಿ ಬಿಪಿಎಲ್ ಕಾರ್ಡ್ ನಿಂದ ವಂಚಿತರಾಗಿದ್ದ ಲಕ್ಷಾಂತರ ಮಂದಿ ರೇಷನ್ ಕಾರ್ಡ್ ಪಡೆಯಲು ನೆರವಾದರು.

2018ರ ಮೈತ್ರಿ ಸರಕಾರದಲ್ಲಿ ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಕಾರ್ಯನಿರ್ವಹಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ವಸತಿ ನಿಗಮದ ಅಧ್ಯಕ್ಷರಾಗಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ, ರಾಜೀವ್ ಗಾಂಧಿ ಹೌಸಿಂಗ್ ಬೋರ್ಡ್​ನ ಅಧ್ಯಕ್ಷರಾಗಿ, ಕರ್ನಾಟಕ ಕೊಳಗೇರಿ ಮಂಡಳಿಯ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿ 2023ರ ವರೆಗೆ ಕಾರ್ಯ ನಿರ್ವಹಿಸಿದ್ದರು.

ಇದನ್ನೂ ಓದಿ: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ಆಯ್ಕೆ: ಇಂದು ನಾಮಪತ್ರ ಸಲ್ಲಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.