ETV Bharat / state

ಕೊಲೆ ಬೆದರಿಕೆ ಹಾಕಿದವರ ಬದಲಿಗೆ ಜಿಲ್ಲಾಧಿಕಾರಿಗೆ ಶಿಕ್ಷೆ: ಡಿಸಿ ವರ್ಗಾವಣೆ ವಿರೋಧಿಸಿದ ಖಾದರ್​​​ - ದಕ್ಷಿಣ ಕನ್ನಡ ಸುದ್ದಿ

"ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ‌"- ಯು.ಟಿ.ಖಾದರ್, ಮಾಜಿ ಸಚಿವ

UT Khader
ಯು ಟಿ ಖಾದರ್
author img

By

Published : Jul 29, 2020, 11:42 AM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಯು.ಟಿ.ಖಾದರ್ ಟ್ವೀಟ್ ಮಾಡಿ, ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಸರ್ಕಾರ ಶಿಕ್ಷೆ ನೀಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಜಾನುವಾರು ಸಾಗಾಟ ಮಾಡುವವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಬೇಕು. ಅವರ ಮೇಲೆ ಸಾರ್ವಜನಿಕರು ಕಾನೂನು ಕೈಗೆತ್ತಿಕೊಂಡರೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಿಗೆ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್​ಗೆ ಜೀವ ಬೆದರಿಕೆಯನ್ನು ವಾಟ್ಸಪ್ ಮೂಲಕ ಹಾಕಲಾಗಿತ್ತು. ನಿನ್ನೆ ಮಧ್ಯಾಹ್ನದ ವೇಳೆಗೆ ದ.ಕ ಜಿಲ್ಲಾಧಿಕಾರಿ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿತ್ತು.

  • ಕಾನೂನು ಕೈಗೆತ್ತಿಕೊಂಡರೆ,ನೈತಿಕ‌ ಪೋಲಿಸ್ ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ರವರಿಗೆ ಕೊಲೆ ಬೆದರಿಕೆ ಹಾಕಿದರು.ಸರ್ಕಾರ ಕೊಲೆ ಬೆದರಿಕೆ‌ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗಳಿಗೆ ಶಿಕ್ಷೆ ನೀಡಿದೆ.(1) @CMofKarnataka @BSYBJP @BSBommai

    — UT Khadér (@utkhader) July 28, 2020 " class="align-text-top noRightClick twitterSection" data=" ">
  • ಇಂಥಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರುರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೋನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ,ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ.......
    ಉತ್ತರಿಸು ಸರ್ಕಾರ #ನ್ಯಾಯ ಎಲ್ಲಿದೆ ? ? ?@CMofKarnataka @BSYBJP @BSBommai

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ ಯು.ಟಿ.ಖಾದರ್, "ಕಾನೂನು ಕೈಗೆತ್ತಿಕೊಂಡರೆ, ನೈತಿಕ ಪೊಲೀಸ್​​ಗಿರಿ ಮಾಡಿದ್ರೆ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಕ್ಕೆ ದುಷ್ಕರ್ಮಿಗಳು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್​ಗೆ ಕೊಲೆ ಬೆದರಿಕೆ ಹಾಕಿದರು. ಸರ್ಕಾರ ಕೊಲೆ ಬೆದರಿಕೆ ಹಾಕಿದವರಿಗೆ ಶಿಕ್ಷೆ ನೀಡುವ ಬದಲು ಜಿಲ್ಲಾಧಿಕಾರಿಗೆ ಶಿಕ್ಷೆ ನೀಡಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಧಿಕಾರಿಗಳಿಗೆ ಧೈರ್ಯ ತುಂಬುವ ಬದಲು ಬಿಜೆಪಿ ಮುಖಂಡರು ರಾಜಕೀಯ ಮೇಲಾಟ ಮಾಡುತ್ತಿದ್ದಾರೆ. ಮಾರಕ ಕೊರೊನಾ ಜನರನ್ನು ಉಸಿರುಗಟ್ಟಿಸುತ್ತಿದ್ದರೆ, ಬಿಜೆಪಿ ಜನಪ್ರತಿನಿಧಿಗಳು ಅಧಿಕಾರಿಗಳ ಉಸಿರುಗಟ್ಟಿಸುತ್ತಿದ್ದಾರೆ‌. ಉತ್ತರಿಸು ಸರ್ಕಾರ, ನ್ಯಾಯ ಎಲ್ಲಿದೆ? ಎಂದು ಪ್ರಶ್ನಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.