ಮಂಗಳೂರು: ಹಿರಿಯ ಸಾಹಿತಿ ಏರ್ಯ ಲಕ್ಷ್ಮೀ ನಾರಾಯಣ ಆಳ್ವ ಅವರು ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೊಡಂಕಾಂಪುವಿನ ಏರ್ಯದ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ.
ಕನ್ನಡ ಸಾಹಿತ್ಯದಲ್ಲಿ ವಿಶೇಷ ಸೇವೆಗೈದಿದ್ದ ಅವರು ಹಲವಾರು ಅಭಿನಂದನಾ ಗ್ರಂಥಗಳನ್ನು ಸಂಪಾದನೆ ಮಾಡಿದ್ದಾರೆ. ಅಲ್ಲದೆ ಅಂಕಣಕಾರರಾಗಿ, ಅನೇಕ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸಂಘಟಕರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ ಜನಮಾನಸದಲ್ಲಿ ಚಿರಸ್ಥಾಯಿಯಾಗಿದ್ದರು.
ಏರ್ಯ ಲಕ್ಷ್ಮೀನಾರಾಯಣ ಆಳ್ವರ ಸಾವಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಕಲ್ಲಡ್ಕ ಪ್ರಭಾಕರ್ ಭಟ್, ಮಾಜಿ ಸಚಿವ ರಮಾನಾಥ ರೈ ಸೇರಿದಂತೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.