ETV Bharat / state

ಗೋಹತ್ಯೆ ತಡೆಗೆ ಪ್ರಬಲ ಕಾನೂನು ಜಾರಿ ಮಾಡಿ: ವಿಶ್ವ ಹಿಂದೂ ಪರಿಷತ್ ಆಗ್ರಹ

ಗೋವಧೆ ಮಾಡಿದವರಿಗೆ ಹಾಲಿ ಕಾನೂನಿನಲ್ಲಿ 6 ತಿಂಗಳ ಶಿಕ್ಷೆ ಮತ್ತು 1 ಸಾವಿರ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಹೀಗಾಗಿ ಗೋ ಹತ್ಯೆ ನಡೆಯುತ್ತಿದೆ. ಇದರ ಬದಲು ಗೋ ಹಂತಕರಿಗೆ ಗರಿಷ್ಠ 10 ವರ್ಷ ಜೈಲು ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

VHP Dakshina kannada
ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಘಟಕ
author img

By

Published : Sep 22, 2020, 8:42 PM IST

ಪುತ್ತೂರು (ದ.ಕ): ರಾಜ್ಯದಲ್ಲಿ ಗೋ ಹತ್ಯಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುವಂತಹ ಪ್ರಬಲ ಗೋಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತರುವಂತೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಘಟಕ ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುತ್ತೂರು ಜಿಲ್ಲಾ ಗೋರಕ್ಷಾ ಪ್ರಮುಖ್ ಸರಪಾಡಿ ಅಶೋಕ್ ಶೆಟ್ಟಿ, ಬಜರಂಗದಳದ ಕಾರ್ಯಕರ್ತರು ಜೀವದ ಹಂಗು ತೊರೆದು ಸಾವಿರಾರು ಗೋವುಗಳ ರಕ್ಷಣೆ ಮಾಡಿ ವಿವಿಧ ಗೋ ಶಾಲೆಗಳಿಗೆ ಅವುಗಳನ್ನು ಸುರಕ್ಷಿತವಾಗಿ ತಲುಪಿಸುತ್ತಿದ್ದಾರೆ.

ಗೋಹತ್ಯೆ ತಡೆಯಲು ಪ್ರಬಲ ಕಾನೂನು ಜಾರಿ ಮಾಡುವಂತೆ ವಿಶ್ವ ಹಿಂದೂ ಪರಿಷತ್ ಆಗ್ರಹ

ಅಕ್ರಮವಾಗಿ ಗೋವುಗಳನ್ನು ಸಾಗಣೆ ಮಾಡುವವರಿಗೆ, ಗೋವಧೆ ಮಾಡುವವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದರೂ ದುರ್ಬಲ ಕಾಯ್ದೆಯ ಕಾರಣದಿಂದಾಗಿ ಇಲ್ಲಿಯವರೆಗೆ ಒಬ್ಬನೇ ಒಬ್ಬ ಆರೋಪಿಗೆ ಶಿಕ್ಷೆಯಾಗದಿರುವುದು ದುಃಖಕರ ಸಂಗತಿ ಎಂದರು.

ಗೋವಧೆ ಮಾಡಿದವರಿಗೆ ಹಾಲಿ ಕಾನೂನಿನಲ್ಲಿ 6 ತಿಂಗಳ ಶಿಕ್ಷೆ ಮತ್ತು 1 ಸಾವಿರ ರೂಪಾಯಿ ದಂಡ ವಿಧಿಸಲು ಅವಕಾಶವಿದೆ. ಆದ ಕಾರಣದಿಂದಲೇ ನಿರಂತರವಾಗಿ ಗೋಹತ್ಯಾ ಪ್ರಕರಣಗಳು ನಡೆಯುತ್ತಿವೆ ಎಂದರು.

ರಾಜ್ಯದಲ್ಲಿ ಗೋಸೇವಾ ಆಯೋಗವನ್ನು ಸ್ಥಾಪಿಸುವ ಮೂಲಕ ಪ್ರಬಲ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ತರಬೇಕು. ಈ ಕುರಿತು ವಿಶ್ವ ಹಿಂದೂ ಪರಿಷತ್ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ. ಗೋ ಹಂತಕರಿಗೆ ಗರಿಷ್ಠ 10 ವರ್ಷ ಜೈಲು ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಬೇಕು. ಅಕ್ರಮ ಗೋ ಸಾಗಣೆಗಾರರಿಗೆ 7 ವರ್ಷ ಕಠಿಣ ಸಜೆ ಹಾಗೂ ಸಾಗಣೆ ವಾಹನವನ್ನು ಶಾಶ್ವತವಾಗಿ ಮುಟ್ಟುಗೋಲು ಹಾಕಬೇಕು. ಅಪರಾಧಿ ಚಾಲಕನ ಚಾಲನಾ ಪರವಾನಗಿಯನ್ನು ಶಾಶ್ವತವಾಗಿ ರದ್ದುಗೊಳಿಸಬೇಕು. ರೈತನಾಯಕ, ಗೋ ಪ್ರೇಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹಾಲಿ ವಿಧಾನಸಭಾ ಅಧಿವೇಶನದಲ್ಲಿ ಪ್ರಬಲ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಅಶೋಕ್ ಶೆಟ್ಟಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ಬಿ.ಎಸ್. ಸತೀಶ್, ಬಜರಂಗದಳ ದಕ್ಷಿಣ ಪ್ರಾಂತ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.