ಉಳ್ಳಾಲ: ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಓದಿ: ನಕಲಿ ಆಧಾರ್ ಕಾರ್ಡ್ ತೋರಿಸಿ ಅಪ್ರಾಪ್ತೆ ಮದುವೆ: ವರನ ಕುಟುಂಬ ಪರಾರಿ!
ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.