ETV Bharat / state

ಪ್ರಕೃತಿ ಚಿಕಿತ್ಸೆಯ ಜಾಗೃತಿ ಮೂಡಿಸುವಲ್ಲಿ ವೀರೇಂದ್ರ ಹೆಗ್ಗಡೆಯವರ ಪಾತ್ರ ಅನನ್ಯ : ಡಾ ಮೋಹನ ಆಳ್ವ

ಆಧುನಿಕ ಜೀವನದ ಜೊತೆಗೆ ಜನರು ಪ್ರಕೃತಿ ಚಿಕಿತ್ಸೆ ಹಾಗೂ ಸರಳ ಜೀವನದತ್ತ ಆಸಕ್ತರಾಗುತ್ತಿರುವುದು ಉತ್ತಮ ಬೆಳವಣಿಗೆ. ಈ ಪ್ರಕೃತಿ ಚಿಕಿತ್ಸೆಯಲ್ಲಿ ಸಾಧಕರನ್ನು ಔಷಧಿ ಇಲ್ಲದೆ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಸೇವೆ ನೀಡಲಾಗುತ್ತದೆ..

Mohan Alva
ಡಾ. ಮೋಹನ್ ಆಳ್ವ ಹೇಳಿಕೆ
author img

By

Published : Jan 2, 2021, 5:38 PM IST

ಬೆಳ್ತಂಗಡಿ : ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ನೋಡಿಕೊಳ್ಳುವುದೇ ಪ್ರಕೃತಿ ಚಿಕಿತ್ಸೆಯ ಉದ್ದೇಶ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ್ ಆಳ್ವ ಹೇಳಿದರು.

ಧರ್ಮಸ್ಥಳದ ಎಸ್‍ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಪ್ರಕೃತಿ ಚಿಕಿತ್ಸಾ ಸಾಧಕರ ವಾಸ್ತವ್ಯಕ್ಕಾಗಿ ನಿರ್ಮಿಸಲಾಗಿರುವ ಶಬರಿ, ವಾಲ್ಮೀಕಿ, ಗುಹಾ, ಏಕಲವ್ಯ ಕುಟೀರಗಳನ್ನು ಉದ್ಘಾಟನೆಗೊಳಿಸಿ ಮಾತನಾಡಿದ ಅವರು, ಎಸ್‍ಡಿಎಂನ ಪ್ರಕೃತಿ ಚಿಕಿತ್ಸಾಲಯದಲ್ಲಿ ಪಂಚಭೂತಗಳಿಂದ ಸೃಷ್ಟಿಯಾದ ದೇಹಕ್ಕೆ ಜಲ, ವಾಯು, ಮಣ್ಣು ಹೀಗೆ ಪಂಚಭೂತ ತತ್ವಗಳನ್ನು ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಪ್ರಕೃತಿ ಚಿಕಿತ್ಸೆಯ ಮಹತ್ವವನ್ನು ನಾಡಿನೆಲ್ಲೆಡೆ ತಿಳಿಸಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಡಾ ಡಿ. ವೀರೇಂದ್ರ ಹೆಗ್ಗಡೆ ಅವರು ಮಾತನಾಡಿ, ಕೊರೊನಾ ನಂತರದ ಸಮಯದಲ್ಲಿ ಪೇಟೆಗೆ ವಲಸೆ ಹೋದ ಅನೇಕರು ಹಳ್ಳಿಗಳಿಗೆ ಮರಳಿ, ತಮ್ಮ ಹೊಲ-ಗದ್ದೆಗಳಲ್ಲಿ ದುಡಿಯುತ್ತ, ಹೈನುಗಾರಿಕೆ ಇತ್ಯಾದಿಗಳ ಬಗ್ಗೆ ಆಸಕ್ತಿ ವಹಿಸುತ್ತಿದ್ದಾರೆ.

ಆಧುನಿಕ ಜೀವನದ ಜೊತೆಗೆ ಜನರು ಪ್ರಕೃತಿ ಚಿಕಿತ್ಸೆ ಹಾಗೂ ಸರಳ ಜೀವನದತ್ತ ಆಸಕ್ತರಾಗುತ್ತಿರುವುದು ಉತ್ತಮ ಬೆಳವಣಿಗೆ. ಈ ಪ್ರಕೃತಿ ಚಿಕಿತ್ಸೆಯಲ್ಲಿ ಸಾಧಕರನ್ನು ಔಷಧಿ ಇಲ್ಲದೆ ಸ್ವಾಸ್ಥ್ಯ ಕಾಪಾಡಿಕೊಳ್ಳುವ ಸೇವೆ ನೀಡಲಾಗುತ್ತದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.