ಮಂಗಳೂರು: ಪಿಎಫ್ಐ ಮತ್ತು ಎಸ್ಡಿಪಿಐ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಇವೆರಡನ್ನು ರಾಜ್ಯದಲ್ಲಿ ನಿಷೇಧಿಸಬೇಕು ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಆಗ್ರಹಿಸಿದರು.
ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮಾಜ ವಿರೋಧಿ ಚಟುವಟಿಕೆಗಳು ಹೆಚ್ಚುತ್ತಿದ್ದು, ಪೊಲೀಸ್ ಇಲಾಖೆ ಕಡಿವಾಣ ಹಾಕಬೇಕಿದೆ ಎಂದರು.
ಮಂಗಳೂರಿನಲ್ಲಿ ದೇಶದ್ರೋಹದ ಗೋಡೆ ಬರಹಗಳನ್ನು ಬರೆದಿರುವುದು, ಪೊಲೀಸರ ಮೇಲೆ ಕೊಲೆ ಯತ್ನ ನಡೆಸಿರುವುದು, ಬೆಳ್ತಂಗಡಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು, ಹಿಂದೂ ಧಾರ್ಮಿಕ ಕೇಂದ್ರಗಳನ್ನು ಅಪವಿತ್ರಗೊಳಿಸುವುದು, ಮಹಿಳೆಯರ ಮೇಲೆ ದೌರ್ಜನ್ಯ ನಡೆಸುತ್ತಿರುವ ಪ್ರಕರಣಗಳು ನಡೆಯುತ್ತಿದೆ. ಇಷ್ಟೆಲ್ಲ ಕೃತ್ಯಗಳು ನಡೆಯುತ್ತಿದ್ದು, ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.