ಮಂಗಳೂರು: ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕು. ಜೊತೆಗೆ ಎಸ್‌ಡಿಪಿಐ ಸಂಘಟನೆಯನ್ನು ನಿಷೇಧಿಸಿ ಎಂದು ಮಂಗಳೂರು ವಿಶ್ವ ಹಿಂದೂ ಪರಿಷತ್ ಸದಸ್ಯರು ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ವಿಹೆಚ್‌ಪಿ ಮುಖಂಡರು ಮನವಿ ನೀಡಿದ್ದಾರೆ.
ಈ ಘಟನೆಯ ಹಿಂದೆ ರಾಷ್ಟ್ರದ್ರೋಹಿ ಸಂಘಟನೆ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಮತ್ತು ಭಯೋತ್ಪಾದಕರ ಕೈವಾಡವಿದೆ. ಹಾಗಾಗಿ, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಒತ್ತಾಯಿಸಲಾಗಿದೆ.