ಕಡಬ: ಇಲ್ಲಿನ ರಾಮಕುಂಜ ಶ್ರೀರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಶ್ರೀವಿಶ್ವೇಶತೀರ್ಥ ಸ್ವಾಮೀಜಿಗಳ ಪುತ್ಥಳಿ ಮತ್ತು ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ಧ್ಯಾನಕೇಂದ್ರವನ್ನು ಲೋಕಾರ್ಪಣೆ ಮಾಡಲಾಯಿತು.
ರಾಮಕುಂಜ ಗ್ರಾಮದಲ್ಲಿ ದಶಕಗಳ ಹಿಂದೆಯೇ ಪೇಜಾವರ ಶ್ರೀಗಳು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪನೆ ಮಾಡಿ ಬಡ ಮಕ್ಕಳಿಗೆ ಪ್ರಾಥಮಿಕ, ಪ್ರೌಢ ಹಾಗೂ ಪದವಿಯವರೆಗಿನ ಉತ್ತಮ ಶಿಕ್ಷಣದ ವ್ಯವಸ್ಥೆ ಮಾಡಿದ್ದಾರೆ. ಪ್ರಸ್ತುತ ಇಲ್ಲಿ ಎರಡೂವರೆ ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಇದೀಗ ರಾಮಕುಂಜೇಶ್ವರ ವಿದ್ಯಾಸಂಸ್ಥೆಗಳ ಆವರಣದಲ್ಲಿ ಪೂಜ್ಯ ಶ್ರೀಗಳ ಪುತ್ಥಳಿ ಮತ್ತು ಧ್ಯಾನಕೇಂದ್ರ ನಿರ್ಮಿಸಮಿಸಲಾಗಿದೆ.
ಶ್ರೀಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಉಡುಪಿಯ ಅದಮಾರು ಮಠಾಧೀಶರಾದ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು ಪುತ್ಥಳಿ ಅನಾವರಣಗೊಳಿಸಿ, ಧ್ಯಾನಕೇಂದ್ರವನ್ನು ಉದ್ಘಾಟಿಸಿದರು.
ಈ ವೇಳೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಶ್ರೀಮಠದ ದಿವಾನರಾದ ಎಂ.ರಘುರಾಮಾಚಾರ್ಯ, ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಇದನ್ನೂ ಓದಿ: ರಾಜ್ಯದಲ್ಲಿ 12 ಹೊಸ ಒಮಿಕ್ರಾನ್ ಪ್ರಕರಣ ದೃಢ,ಹೊಸ ತಳಿ ಸೋಂಕಿತರ ಸಂಖ್ಯೆ 31 ಕ್ಕೇರಿಕೆ