ETV Bharat / state

ಕೊರೊನಾ ಪಾಸಿಟಿವ್ ಬಂದಿದ್ದ ವಿಟ್ಲ ಪೊಲೀಸ್​ ಸಿಬ್ಬಂದಿ ಗುಣಮುಖ - Dakshina Kannada latest news

ಕೊರೊನಾ ಪಾಸಿಟಿವ್ ಬಂದಿದ್ದ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

Vitla police station
Vitla police station
author img

By

Published : Jun 1, 2020, 7:10 PM IST

ಬಂಟ್ವಾಳ: ಕೊರೊನಾ ಪಾಸಿಟಿವ್​ ಬಂದಿದ್ದ ವಿಟ್ಲ ಪೊಲೀಸ್​ ಠಾಣೆಯ ಸಿಬ್ಬಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ.

ಮಹಾರಾಷ್ಟ್ರದ ರಾಯಗಡದಿಂದ ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢವಾಗುತ್ತಿದ್ದಂತೆ, ಠಾಣೆಯ 5 ಸಿಬ್ಬಂದಿ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ವರದಿಯಲ್ಲಿ ಓರ್ವ ಪೊಲೀಸ್​ ಸಿಬ್ಬಂದಿಗೆ ಕೊರೊನಾ ಇರುವುದು ದೃಢಪಟ್ಟ ತಕ್ಷಣವೇ ಸಿಬ್ಬಂದಿಯನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.

ಇದೀಗ ಮತ್ತೆ ಸಿಬ್ಬಂದಿ ಪರೀಕ್ಷೆ ನಡೆಸಿದ್ದು, ವರದಿಯಲ್ಲಿ ನೆಗೆಟಿವ್​ ಬಂದ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ ನಲ್ಲಿ ಇರಲು ಸೂಚಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.