ಮಂಗಳೂರು: ಕೋವಿಡ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ನಗರದ ಉರ್ವ ಮಾರುಕಟ್ಟೆಯನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ.
ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಉರ್ವ ಮಾರುಕಟ್ಟೆಯ ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 1 ರವರೆಗೆ ವ್ಯಾಪಾರ ವಹಿವಾಟು ನಡೆಸಿ ಮಧ್ಯಾಹ್ನದ ಬಳಿಕ ಬಂದ್ ಮಾಡಲು ನಿರ್ಧಾರ ಮಾಡಿದ್ದಾರೆ. ಆದರೆ ಶನಿವಾರ ಮಾತ್ರ ಬೆಳಗ್ಗೆ 6 ರಿಂದ ರಾತ್ರಿ 8 ರವರೆಗೆ ಮಾರುಕಟ್ಟೆ ತೆರೆದಿರುತ್ತದೆ.
ರವಿವಾರ ಸರ್ಕಾರವೇ ಲಾಕ್ಡೌನ್ ಆದೇಶ ಮಾಡಿರೋದರಿಂದ ಮಾಮೂಲಿ ಬಂದ್ ಇರಲಿದೆ. ಈ ಬಗ್ಗೆ ಮಾರುಕಟ್ಟೆ ಪ್ರದೇಶದಲ್ಲಿ ಬ್ಯಾನರ್ ಹಾಕಿ ಮಾಹಿತಿ ನೀಡಲಾಗಿದೆ.