ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು (ಜ.15) ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಭಾಗಿಯಾಗುವ ನಾಗರಿಕರಿಗೆ ತೊಂದರೆ ಮಾಡಬೇಡಿ. ಅವರನ್ನು ತಡೆಯ ಬೇಡಿ. ಇದರಿಂದ ಕಾನೂನು ಕೈಗೆತ್ತಿಕೊಳ್ಳಬಹುದು ಎಂದು ಮಾಜಿ ಶಾಸಕ ಮೊಯಿದ್ದೀನ್ ಬಾವ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಯಾರ್ ಹೊರವಲಯದಲ್ಲಿ ಮುಸ್ಲಿಂ ಸೆಂಟ್ರಲ್ ಕಮಿಟಿ ಹಮ್ಮಿಕೊಂಡ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಹೊರ ಜಿಲ್ಲೆಗಳಿಂದಲೂ ಅನೇಕ ನಾಗರಿಕರು ಭಾಗವಹಿಸಿದ್ದಾರೆ. ಅವರನ್ನು ಎಲ್ಲಿಯೂ ತಡೆಗಟ್ಟುವ ಪ್ರಯತ್ನಕ್ಕೆ ಪೊಲೀಸರು ಮುಂದಾಗಬಾರದು. ಅವರಿಗೆ ಸಮಸ್ಯೆಯಾದರೆ ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುತ್ತದೆ. ದಯಮಾಡಿ ಅವರನ್ನು ತಡೆಯ ಬೇಡಿ ಎಂದು ಮನವಿ ಮಾಡಿದ್ದಾರೆ.
ಪೊಲೀಸ್ ಅಧಿಕಾರಿಗಳು ಪ್ರತಿಭಟನೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.