ಮಂಗಳೂರು: ನಗರಕ್ಕೆ ನೀರು ಪೂರೈಕೆ ಮಾಡುವ ತುಂಬೆ ಡ್ಯಾಂನಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವುದರಿಂದ ನೀರು ಸರಬರಾಜಿನಲ್ಲಿ ರೇಶನಿಂಗ್ ಆರಂಭಿಸಲಾಗಿದೆ. ಅದರಂತೆ ಇಂದಿನಿಂದ ಎರಡು ದಿನಗಳ ಕಾಲ ಮಂಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಸ್ಥಗಿತಗೊಳ್ಳಲಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ ಮೇ 3ರ ಬೆಳಗ್ಗೆ 6 ಗಂಟೆಯವರೆಗಿನ 48 ತಾಸು ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಮೇ 3ರ ಬೆಳಗ್ಗೆ 6 ಗಂಟೆಯಿಂದ ಮೇ 7ರ ಬೆಳಗ್ಗೆ 6 ಗಂಟೆವರೆಗೆ 96 ಗಂಟೆ ನೀರು ಸರಬರಾಜು ನಡೆಯಲಿದೆ.
ಏಪ್ರಿಲ್ ತಿಂಗಳಲ್ಲಿ ನೀರು ರೇಶನಿಂಗ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದ್ದರೂ ರಾಜಕಾರಣಿಗಳ ಒತ್ತಡದ ಹಿನ್ನೆಲೆಯಲ್ಲಿ ಅದನ್ನು ಸ್ಥಗಿತಗೊಳಿಸಲಾಗಿತ್ತು. ಆದರೆ, ತುಂಬೆ ಡ್ಯಾಂನಲ್ಲಿ ನಿತ್ಯ ಸರಬರಾಜು ಮಾಡಿದರೆ ಈ ತಿಂಗಳ ಅಂತ್ಯಕ್ಕೆ ಮಂಗಳೂರು ನಗರಕ್ಕೆ ನೀರು ಸರಬರಾಜು ಮಾಡಲಾಗದಂತೆ ಡ್ಯಾಂ ಬತ್ತಲಿದ್ದು, ಇಂದಿನಿಂದಲೇ ರೇಶನಿಂಗ್ ಆರಂಭಿಸಲಾಗಿದೆ ಎಂದು ತಿಳಿದು ಬಂದಿದೆ.