ಮಂಗಳೂರು: ಮಂಗಳೂರು ಗೋಲಿಬಾರ್ನಲ್ಲಿ ಮೃತಪಟ್ಟವರಿಗೆ ತನಿಖೆ ನಂತರ ನಿರ್ಣಯಗಳ ಪ್ರಕಾರ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶಾಂತಿ ಸಭೆಯ ನೇತೃತ್ವವನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಹಿಸಿದ್ದರು. ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ವಿವಿಧ ಧರ್ಮಗಳ ಮುಖಂಡರು ಮತ್ತು ಅಧಿಕಾರಿಗಳು ಶಾಂತಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಡಿಸೆಂಬರ್ 19ರ ಬಳಿಕ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜ.4ರಂದು ಮುಸ್ಲಿಂ ಸಂಘಟನೆಗಳು ಪ್ರತಿಭಟನೆಗೆ ಅವಕಾಶ ಕೇಳಿದ್ದಾರೆ. ಜ.12 ರಂದು ಹಿಂದೂ ಪರ ಸಂಘಟನೆಗಳು ಜಾಗೃತಿ ಕಾರ್ಯಕ್ರಮ ಮಾಡಲು ಅವಕಾಶ ಕೇಳಿವೆ. ಎರಡು ಸಂಘಟನೆಗಳಿಗೆ ಕಾರ್ಯಕ್ರಮ ಮುಂದೂಡುವಂತೆ ವಿನಂತಿಸಲಾಗಿದೆ ಎಂದರು.
ಸಭೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಪಿ ಎಸ್ ಹರ್ಷ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್, ಮುಸ್ಲಿಂ ಸಮುದಾಯದ ಮುಖಂಡ ಕೆ ಎಂ ಮಸೂದ್, ಹಿಂದು ಸಂಘಟನೆಗಳ ಮುಖಂಡ ಜಗದೀಶ್ ಶೇಣವ, ಮಾಜಿ ಸಚಿವ ಅಭಯಚಂದ್ರ ಜೈನ್, ಮಾಜಿ ಸಚಿವ ಯು ಟಿ ಖಾದರ್ ಹಾಗೂ ಶಾಸಕರುಗಳು ಉಪಸ್ಥಿತರಿದ್ದರು.