ETV Bharat / state

ತಕ್ಷಣ 3 ಸಾವಿರ ಕೋಟಿ ರೂ. ಬಿಡುಗಡೆಗೆ ಕೇಂದ್ರಕ್ಕೆ ಮನವಿ: ಬಿ.ಎಸ್. ಯಡಿಯೂರಪ್ಪ - ಪ್ರವಾಹ ಪೀಡಿತ ಪ್ರದೇಶ

ಇಂದು ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಭೀಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತಕ್ಷಣಕ್ಕೆ ತಾತ್ಕಾಲಿಕ ಪರಿಹಾರವಾಗಿ 3 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

B S Yediyurappa
author img

By

Published : Aug 12, 2019, 1:00 PM IST

ಮಂಗಳೂರು: ರಾಜ್ಯದಲ್ಲಿ ಪ್ರವಾಹದ ಪರಿಣಾಮ 25-30 ಸಾವಿರ ಕೋಟಿ ರೂ. ನಷ್ಟವಾಗಿದೆ. ಸುಮಾರು 19 ರಷ್ಟು ಜಿಲ್ಲೆಗಳು ಪ್ರವಾಹ ಪೀಡಿತವಾಗಿವೆ. ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ 3 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಇಂದು ನಗರಕ್ಕೆ ಆಗಮಿಸಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದಕ್ಕೂ ಮುನ್ನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದ.ಕ.ಜಿಲ್ಲೆಯಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಮೂಡಬಿದ್ರೆ ಹಾಗೂ ಕಡಬದಲ್ಲಿ ಐದು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಸೂಕ್ತ ನೆರೆ ಪರಿಹಾರ ನೀಲಾಗುವುದು ಎಂದರು.

ಈ ಪರಿಹಾರ ಕೇಂದ್ರಗಳಲ್ಲಿ 370 ಮಂದಿ ಆಶ್ರಯ ಪಡೆದಿದ್ದಾರೆ‌. ಸುಮಾರು 432 ಮನೆಗಳು, 16 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿವೆ. ಇಂದು ನಾನು ಬಂಟ್ವಾಳ, ಬೆಳ್ತಂಗಡಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ, ಬಳಿಕ ಧರ್ಮಸ್ಥಳಕ್ಕೆ ಭೇಟಿ ನೀಡಿ ಸಂಜೆ ಮೈಸೂರಿಗೆ ತೆರಳಲಿದ್ದೇನೆ‌ ಎಂದರು.

ಸಂಪುಟ ವಿಸ್ತರಣೆ ಯಾವಾಗ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ಆ.14ರಂದು ದೆಹಲಿಗೆ ಹೋಗಿ ಅಮಿತ್ ಶಾ ಅವರ ಬಳಿ ಮಾತನಾಡುತ್ತೇನೆ. ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು. ಈ ವೇಳೆ ಸಂಸದ ನಳಿನ್ ಕುಮಾರ್, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ವೇದವ್ಯಾಸ್​ ಕಾಮತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Intro:ಮಂಗಳೂರು: ಇಡೀ ರಾಜ್ಯದಲ್ಲಿ ಪ್ರವಾಹದ ಪರಿಣಾಮ 25-30 ಸಾವಿರ ಕೋಟಿ ರೂ. ನಷ್ಟವಾಗಿದೆ. ಸುಮಾರು 19ರಷ್ಟು ಜಿಲ್ಲೆಗಳು ಪ್ರವಾಹ ಪೀಡಿತವಾಗಿದೆ‌. ಹಾಗಾಗಿ ತಕ್ಷಣಕ್ಕೆ ತಾತ್ಕಾಲಿಕ ಪರಿಹಾರ ಮೂರು ಸಾವಿರ ಕೋಟಿ ರೂ.ಬಿಡುಗಡೆ ಮಾಡಲು ಗೃಹಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದೇನೆ. ಆಗಸ್ಟ್ 14 ರಂದು ಡೆಲ್ಲಿಗೆ ಹೋಗಿ ಮಾಡನಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ದ.ಕ.ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಕಾರ್ಯಗಳ ಪರಿಶೀಲನೆ ನಡೆಸಲು ಮಂಗಳೂರಿಗೆ ಆಗಮಿಸಿದ ಅವರು ಬಜ್ಪೆ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

Body:ದ.ಕ.ಜಿಲ್ಲೆಯಲ್ಲಿ ಮಂಗಳೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಹಾಗೂ ಕಡಬದಲ್ಲಿ ಐದು ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. ಪರಿಹಾರ ಕೇಂದ್ರದಲ್ಲಿ 370 ಮಂದಿ ಆಶ್ರಯ ಪಡೆದಿದ್ದಾರೆ‌. ಸುಮಾರು 432 ಮನೆಗಳು ಹಾನಿಗೊಳಗಾಗಿವೆ‌. 16 ಹೆಕ್ಟೇರ್ ಪ್ರದೇಶದಲ್ಲಿ ಬೆಖೆ ಹಾನಿಯಾಗಿವೆ. ಇಂದು ನಾನು ಬಂಟ್ವಾಳ, ಬೆಳ್ತಂಗಡಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಧರ್ಮಸ್ಥಳಕ್ಕೆ ಭೇಟಿ ನೀಡಿ ಸಂಜೆ ಮೈಸೂರಿಗೆ ತೆರಳಲಿದ್ದೇನೆ‌.

ಸಂಪುಟ ವಿಸ್ತರಣೆ ಯಾವಾಗ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ, ಡೆಲ್ಲಿಗೆ ಹೋಗಿ ಅಮಿತ್ ಶಾ ಅವರಲ್ಲಿ ಮಾತನಾಡಿ ಬಳಿಕ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.

ಸಿಎಂ ಬಿ.ಎಸ್‌.ಯಡಿಯೂರಪ್ಪನವರನ್ನು ಸಕಲ ಸರಕಾರಿ ಗೌರವಗಳೊಂದಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ‌ ಸ್ವಾಗತಿಸಲಾಯಿತು. ಈ ಸಂದರ್ಭ ಸಂಸದ ನಳಿನ್ ಕುಮಾರ್, ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಸಂಜೀವ ಮಠಂದೂರು, ವೇದವ್ಯಾಸ ಕಾಮತ್ ಮತ್ತಿತರರು ಉಪಸ್ಥಿತರಿದ್ದರು.

Reporter_Vishwanath Panjimogaru

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.