ಮಂಗಳೂರು: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎನ್ಎಂಪಿಎಯಲ್ಲಿ ಬಿಜೆಪಿ ಮುಖಂಡರ ಸಭೆ ನಡೆಸಿ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಬದಲು ರಸ್ತೆ ಮೂಲಕ ತೆರಳಿದ್ದಾರೆ.
ಮಂಗಳೂರು ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಎನ್ಎಂಪಿಎ ಹೆಲಿಪ್ಯಾಡ್ನಲ್ಲಿ ಬಿಜೆಪಿ ಕೋರ್ ಕಮಿಟಿ ನಾಯಕರ ಜೊತೆಗೆ ಸಭೆ ನಡೆಸಿದರು. ಬಳಿಕ ಅವರು ಹೆಲಿಕಾಪ್ಟರ್ನಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಕೊನೆ ಕ್ಷಣದಲ್ಲಿ ಹೆಲಿಕಾಪ್ಟರ್ನಲ್ಲಿ ತೆರಳುವುದನ್ನು ರದ್ದುಗೊಳಿಸಲಾಯಿತು.
ಹೀಗಾಗಿಯೇ ರಸ್ತೆ ಮೂಲಕ ಪ್ರಧಾನಿಯವರನ್ನು ವಿಮಾನ ನಿಲ್ದಾಣಕ್ಕೆ ಕರೆದುಕೊಂಡು ಹೋಗಲಾಯಿತು. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಮೂಲಕ ಅವರು ನವದೆಹಲಿಗೆ ತೆರಳಿದರು.
ಇದನ್ನೂ ಓದಿ: ಮಂಗಳೂರು: ಪ್ರಧಾನಿ ಮೋದಿ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಕ್ತಿ ಪ್ರದರ್ಶನ