ETV Bharat / state

ಕರಾವಳಿಯಲ್ಲಿ ಖಾಸಗಿ ಬಸ್​ಗಳಲ್ಲಿ ಸಂಚರಿಸುವವರಿಗೆ ಏನು ವ್ಯವಸ್ಥೆ?: ನಳಿನ್ ಕುಮಾರ್ ಕಟೀಲು ಪ್ರಶ್ನೆ! - ಸಿದ್ದರಾಮಯ್ಯ ಕಾಂಗ್ರೆಸ್​ ಗ್ಯಾರಂಟಿ

ಸಿದ್ದರಾಮಯ್ಯ ಕಾಂಗ್ರೆಸ್​ ಗ್ಯಾರಂಟಿಗಳನ್ನು ಜಾರಿ ಮಾಡುವುದಾಗಿ ತೀರ್ಮಾನ ಪ್ರಕಟಿಸುತ್ತಿದ್ದಂತೆ ದೆಹಲಿಯಲ್ಲಿ ಸಿ ಟಿ ರವಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Nalin Kumar and CT Ravi
ನಳಿನ್​ ಕುಮಾರ್​ ಹಾಗೂ ಸಿ ಟಿ ರವಿ
author img

By

Published : Jun 2, 2023, 7:11 PM IST

Updated : Jun 2, 2023, 7:50 PM IST

ನಳಿನ್​ ಕುಮಾರ್​ ಕಟೀಲ್​

ಮಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಘೋಷಣೆಯನ್ನು ಸ್ವಾಗತಿಸುತ್ತೇನೆ. ಜನಪರ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಆದರೆ, ಗ್ಯಾರಂಟಿ ಸ್ಕೀಮ್​ಗೆ ಹಣದ ಮೂಲ, ಹಣದ ಕ್ರೋಢೀಕರಣ, ಎಷ್ಟು ವರ್ಷ ಇರುತ್ತದೆ ಎಂಬುದರ ಬಗ್ಗೆ ಶ್ವೇತಪತ್ರವನ್ನು ಹೊರಡಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು ನಿರುದ್ಯೋಗ ಭತ್ಯೆಗೆ ಮಾನದಂಡ ಹಾಕಲಾಗಿದೆ. ಮೊದಲು ಮಾನದಂಡದ ಬಗ್ಗೆ ಹೇಳಿರಲಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಖಾಸಗಿ ಬಸ್ ಇದೆ. ಹಾಗಾದರೆ ಖಾಸಗಿ ಬಸ್​​​​ಗಳಲ್ಲಿ ಸಂಚರಿಸೋರಿಗೆ ಏನು ವ್ಯವಸ್ಥೆ? ಹಿಂದಿನ ಪಿಂಚಣಿ ಯೋಜನೆಗಳ ಗತಿ ಏನು ಎಂದು ಹೇಳಲಿ. ಜೊತೆಗೆ ರಾಜ್ಯದ ಬೊಕ್ಕಸದ ಹಣದ ಗತಿಯೇನು? ಯಾರಿಗೂ ಹೊರೆಯಾಗದೇ ಹೇಗೆ ನಿಯಂತ್ರಿಸುತ್ತೀರಿ ಎಂದು ಪ್ರಶ್ನಿಸಿದರು.

ನಮ್ಮದು ಶ್ರೀಲಂಕಾ, ಪಾಕಿಸ್ತಾನದಂತೆ ಆರ್ಥಿಕ ಕುಸಿತವಾಗಬಾರದು. ಆದ್ದರಿಂದ ಸರ್ಕಾರ ತಕ್ಷಣ ಗ್ಯಾರಂಟಿ ಯೋಜನೆಗಳ ಆದಾಯದ ಮೂಲಗಳಿಗೆ ಶ್ವೇತಪತ್ರ ಹೊರಡಿಸಲಿ. ಇದು ಚುನಾವಣೆ ಗಿಮಿಕ್ ಆಗಬಾರದು. ತಾ.ಪಂ, ಜಿ.ಪಂ ಚುನಾವಣೆಯನ್ನು ಮುಂದಿಟ್ಟುಕೊಂಡು ಈ ಯೋಜನೆ ಮಾಡಲಾಗಿದೆ ಎಂಬ ಅನುಮಾನವಿದೆ. ಹೀಗಾಗಿ ಜನರಿಗೆ ಹೊರೆಯಾಗದಂತೆ ಈ ಯೋಜನೆಗಳು ಜಾರಿಯಾಗಲಿ. ಖಾಸಗಿ ಬಸ್​​​ಗಳ ಬಗ್ಗೆ ಎಲ್ಲೂ ಮಾತನಾಡಿಲ್ಲ. ಅದನ್ನೂ ಹೇಳಲಿ ಎಂದು ನಳಿನ್ ಕುಮಾರ್ ಕಟೀಲು ಆಗ್ರಹಿಸಿದರು.

ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಲಿ: ಐದು ಗ್ಯಾರಂಟಿಗಳ ಜಾರಿ ಕುರಿತು ಇಂದಿನ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಇದಕ್ಕೆ ಹಣಕಾಸು ಒದಗಿಸುವ ಕುರಿತು ಸ್ಪಷ್ಟತೆ ನೀಡಿಲ್ಲ ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದ್ದಾರೆ.

ದೆಹಲಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಚುನಾವಣಾ ಪೂರ್ವದಲ್ಲಿ ಭರವಸೆ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸುವ ಸಂಪುಟದ ನಿರ್ಣಯದ ಜೊತೆಗೆ ಯಾವಾಗದಿಂದ ಅದು ಜಾರಿ ಆಗಲಿದೆ ಎಂದು ತಿಳಿಸಿದ್ದಾರೆ. ನಾನು ಇದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ಪ್ರಣಾಳಿಕೆಯಲ್ಲಿ ಮುದ್ರಿಸಿರುವಂತೆ ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿ ಅಕ್ಕಿ ಉಚಿತ ಎಂದಿದ್ದೀರಿ. ಅದು ಪ್ರತಿ ಕುಟುಂಬಕ್ಕೆ ಅಲ್ಲ; ನಾವು ಕೊಟ್ಟ ಮಾತಿನಂತೆ ನಡೆಯುವವರು ಎಂದಿದ್ದೀರಿ. ಈಗ ನೀವು ಕುಟುಂಬಕ್ಕೆ 10 ಕೆಜಿ ಅನ್ನುತ್ತೀರಲ್ಲವೇ? ಎಂದು ಪ್ರಶ್ನಿಸಿದರಲ್ಲದೆ, ಜಮೀರ್ ಅಹ್ಮದ್ ಅವರು ಮನೆಮನೆ ಭೇಟಿ ವೇಳೆ ಮನೆಯಲ್ಲಿ 7 ಜನರಿದ್ದರೆ 70 ಕೆಜಿ ಅಕ್ಕಿ ಎಂದಿದ್ದ ವಿಡಿಯೋ ನೋಡಿದ್ದೇನೆ. ಈಗ ನೀವು ಪ್ರತಿ ಕುಟುಂಬಕ್ಕೆ 10 ಕೆಜಿ ಎಂದಿದ್ದೀರಿ. ಅದು ವ್ಯಕ್ತಿಗೋ ಕುಟುಂಬಕ್ಕೋ ಎಂದು ಸ್ಪಷ್ಟಪಡಿಸಿ ಎಂದು ಕೇಳಿದರು.

ವೆನಿಜುವೆಲಾ ಎಂಬ ರಾಷ್ಟ್ರ ಈ ರೀತಿ ಕೊಡುತ್ತ ಕೊಡುತ್ತ ದಿವಾಳಿ ಆಗಿ ಹೋಗಿದೆ. ಹಾಗೇ ನಮ್ಮ ರಾಜ್ಯ ಆಗದಿರಲಿ ಎಂದು ಆಶಿಸಿದ ಸಿ.ಟಿ. ರವಿ ಅವರು, ನೀವು ಬುದ್ಧಿವಂತರಿದ್ದೀರಿ. ಹಣ ಜೋಡಿಸುವ ಸಾಮರ್ಥ್ಯ ಇದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಿ ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ನಮ್ಮ ರಾಜ್ಯದ ಸಂಪನ್ಮೂಲ, ಸಾಲ, ಮೂಲಸೌಕರ್ಯದ ಮೇಲೆ ಹೂಡಿಕೆ ಎಷ್ಟು? ಸಾಲದ ಮೇಲೆ ಕಟ್ಟುವ ಬಡ್ಡಿ ಎಷ್ಟು? ಸಂಬಳ, ನಿವೃತ್ತಿ ವೇತನಕ್ಕೆ ಎಷ್ಟು ಹಣ ವಿನಿಯೋಗ ಆಗುತ್ತಿದೆ? ಎಂದು ಪ್ರಶ್ನಿಸಿದ ಅವರು, ಮೂಲ ಸೌಕರ್ಯದ ಮೇಲೆ ಹೂಡಿಕೆ ಮೂಲಕ ಆದಾಯ ಕ್ರೋಡೀಕರಣ ಸಾಧ್ಯವಿದೆ ಎಂದು ನೆನಪಿಸಿದರು. ಇಲ್ಲವಾದರೆ ಯೋಜನೆಗಳ ಅನುಷ್ಠಾನ ಸಾಧ್ಯವಿಲ್ಲ ಎಂದು ತಿಳಿಸಿದರು.

ಈಗಾಗಲೇ ಚಾಲ್ತಿಯಲ್ಲಿ ಇರುವ ರೈತರಿಗೆ 5 ಲಕ್ಷ ಬಡ್ಡಿ ರಹಿತ ಸಾಲ, ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರದ ಹಣದ ಜೊತೆ ರಾಜ್ಯದಿಂದ 4 ಸಾವಿರ ಕೊಡುತ್ತಿರುವುದು, ಹಾಲಿಗೆ ಪ್ರತಿ ಲೀಟರ್‍ಗೆ 5 ರೂ. ಸಬ್ಸಿಡಿ - ಹೀಗೆ ಹಲವು ಚಾಲ್ತಿಯಲ್ಲಿರುವ ಯೋಜನೆಗಳಿವೆ. ಅವನ್ನು ಮುಂದುವರಿಸುತ್ತೀರಾ? ಇಲ್ಲವೇ? ಎಂದು ಸ್ಪಷ್ಟಪಡಿಸಿ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಆರೋಗ್ಯ, ಶಿಕ್ಷಣದಂಥ ಕ್ಷೇತ್ರಗಳಿಗೆ ಅನುದಾನ ಕಡಿತ ಮಾಡಲು ಸಾಧ್ಯವಿಲ್ಲ.

ಇದೆಲ್ಲದಕ್ಕೂ ಅನುದಾನ ಮೀಸಲಿಡಲು ಎಷ್ಟು ಹಣ ಬೇಕು? ಅದನ್ನು ಕ್ರೋಡೀಕರಿಸುವುದು ಹೇಗೆ? ಯಾವ ಮೂಲದಿಂದ? ಇದಕ್ಕೆ ಸಂಬಂಧಿಸಿ ಶ್ವೇತಪತ್ರ ಹೊರಡಿಸಬೇಕು. ಆಗ ಮಾತ್ರ ಈ ಯೋಜನೆ ತಾತ್ಕಾಲಿಕವೇ? ನಿರಂತರವಾಗಿ ಕೊಡಲು ಸಾಧ್ಯವೇ? ಅಷ್ಟು ಹಣ ನಮ್ಮಲ್ಲಿದೆಯೇ? – ಇದೆಲ್ಲವನ್ನೂ ತಿಳಿಯಲು ಸಾಧ್ಯವಾಗಲಿದೆ. ಈ ಶ್ವೇತಪತ್ರದಿಂದ ತೆರಿಗೆದಾರರಿಗೆ ಸ್ಪಷ್ಟತೆ ಲಭಿಸಲಿದೆ. ಭೀತಿ ದೂರವಾಗಲಿದೆ. ಸಾಲ ಮಾಡುವಿರಾ? ಹೊಸ ತೆರಿಗೆ ಹಾಕುವಿರಾ? ಖರ್ಚು ಉಳಿತಾಯ ಮಾಡಿ ಭರಿಸುವಿರಾ? ಎಂದು ಪ್ರಶ್ನೆಗಳನ್ನು ಮುಂದಿಟ್ಟರು.

ಆರ್ಥಿಕ ಸಂಕಷ್ಟದ ಕುರಿತು ಎಚ್ಚರವಿರಲಿ: ಗ್ಯಾರಂಟಿಗಳ ಅನುಷ್ಠಾನದ ಹಂತದಲ್ಲಿ ಲೋಪದೋಷ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ಆಡಳಿತದ ಮೇಲಿದೆ ಎಂದು ಎಚ್ಚರಿಸಿದರು. ಮೂಲಸೌಕರ್ಯದ ಹೂಡಿಕೆಯಲ್ಲಿ ಕೊರತೆ ಆದರೆ ಅದರ ಪರಿಣಾಮ ಉದ್ಯೋಗ ಸೃಷ್ಟಿಯ ಮೇಲೆ ಆಗಿ, ಆದಾಯ ಗಳಿಕೆಯೂ ಕಡಿಮೆ ಆಗಲಿದೆ. ಇದರ ಕಡೆಗೂ ಲಕ್ಷ್ಯ ಇರಲಿ. ಸ್ವಾವಲಂಬಿ ಆಗುವ ಯೋಜನೆಗಳಿಗೆ ಒತ್ತು ಕೊಡದೇ ಇದ್ದರೆ ಮುಂದೊಂದು ದಿನ ನಮ್ಮನ್ನು ಅದು ವೆನಿಜುವೆಲಾ, ಶ್ರೀಲಂಕಾ, ಪಾಕಿಸ್ತಾನದಂಥ ಆರ್ಥಿಕ ಸಂಕಷ್ಟದ ಪರಿಸ್ಥಿತಿಗೆ ದೂಡಬಹುದು. ಹಾಗೆ ಆಗದೇ ಇರಲು ನಾವು ಏಕ್ ದಿನ್ ಕಾ ಸುಲ್ತಾನ್ ಆಗಬಾರದು ಎಂದು ಎಚ್ಚರಿಕೆ ನೀಡಿದರು.

ಸಂಸತ್ ಚುನಾವಣೆ ಆಗಿಬಿಡಲಿ ನೋಡೋಣ, ಕಾರ್ಪೊರೇಷನ್ ಇಲೆಕ್ಷನ್ ಆಗಲಿ ನೋಡೋಣ. ಜಿಲ್ಲಾ ಪಂಚಾಯಿತಿ ಚುನಾವಣೆ ಆಗಲಿ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ; ರಾಜ್ಯ ಹಾಳಾಗಲಿ ಎಂಬ ಮನಸ್ಥಿತಿಗೆ ಬರಬಾರದು. ಹಾಗಾಗದೆ ಇರಲು ಸಮಗ್ರ ಶ್ವೇತಪತ್ರವನ್ನು ಹೊರಡಿಸಲು ವಿನಂತಿ ಮಾಡಿದರು.

ಇದನ್ನೂ ಓದಿ: ನಾಡಿನ ಎಲ್ಲಾ ಜನತೆಗೂ ಜಾತಿ, ಮತ, ಧರ್ಮ ಭೇದವಿಲ್ಲದೆ ಉಚಿತ 200 ಯೂನಿಟ್ ವಿದ್ಯುತ್ ಜಾರಿ : ಸಿಎಂ

Last Updated : Jun 2, 2023, 7:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.