ETV Bharat / state

ಸುಬ್ರಹ್ಮಣ್ಯ- ಗುಂಡ್ಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರದ ಬಸ್ಸಿಗೆ ದಂತದಿಂದ ತಿವಿದ ಕಾಡಾನೆ - ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಬಸ್‌ಗೆ ದಂತದಿಂದ ತಿವಿದ ಕಾಡಾನೆ, ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು, ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು.. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತ ಗುರುವಾರ ನಡೆದ ಘಟನೆಗಳಿವು.

bus
ಹಾನಿಯಾದ ಬಸ್​
author img

By

Published : Jun 2, 2023, 7:23 AM IST

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾತ್ರಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್‌ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಇದಾಗಿತ್ತು. ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆ ಕಂಡು ಅನಾಹುತ ತಪ್ಪಿಸಲು ಯತ್ನಿಸಿದ್ದಾರೆ. ಆದರೂ ಆನೆ ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ ಎನ್ನಲಾಗಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ: ಕಾಲೇಜು ಮುಗಿಸಿ ಮನೆಗೆ ತೆರಳುವ ಸಂದರ್ಭದಲ್ಲಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಯರ ಮೇಲೆ ಕಾರೊಂದು ಹಿಂಬದಿಯಿಂದ ಗುದ್ದಿದ್ದು ಮೂವರು ವಿದ್ಯಾರ್ಥಿನಿಯರು ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಿಂಚನ ವಿ.ಪಿ, ಬಿಂಬಿಕ, ಹನಿಷ್ಕ.ಎಸ್.ಆರ್, ಶಾಲಿನಿ ಎಂ, ಜಷ್ಮಿತಾ ಹಾಗು ಕೃತಿ ಗಾಯಗೊಂಡಿದ್ದಾರೆ.

car
ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದ ಕಾರು

ವಲ್ಲೀಶ ಸಭಾಭವನದ ಎದುರಿನ ಕಾಲೇಜು ತಿರುವಿನ ಸಮೀಪ ವಿದ್ಯಾರ್ಥಿಗಳು ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟು ಗಾಯಗಳಾಗಿವೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಸಿಂಚನ ವಿ.ಪಿ ಸುಳ್ಯ ಸರಕಾರಿ ಆಸ್ಪತ್ರೆ ಹಾಗೂ ಬಿಂಬಿಕ, ಹನಿಷ್ಕ ಎಸ್.ಆರ್ ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಶಾಲಿನಿ ಎಂ, ಜಷ್ಮಿತಾ, ಕೃತಿ ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಸುಬ್ರಹ್ಮಣ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹಂಪ್ಸ್ ನಿರ್ಮಾಣಕ್ಕೆ ಆಗ್ರಹ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಬಳಿಯಿಂದ ಕ್ಷೇತ್ರದಲ್ಲಿ ರಸ್ತೆಗಳು ಕಾಂಕ್ರೀಟ್ ರಸ್ತೆಗಳಾಗಿ ಅಭಿವೃದ್ಧಿಗೊಂಡಿದೆ. ಆದರೆ ಆಯ್ದ ಸ್ಥಳಗಳಲ್ಲಿ ಹಂಪ್ಸ್ ನಿರ್ಮಾಣವಾಗದೇ ಇಂತಹ ಘಟನೆಗಳು ಮರುಕಳುಹಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಎಸ್.ಎಸ್.ಪಿ.ಯು ಕಾಲೇಜಿನ ವಲ್ಲೀಶ ಸಭಾಭವನದ ಬಳಿ, ಕೆ.ಎಸ್.ಎಸ್ ಕಾಲೇಜು ಬಳಿ, ಬಿಲದ್ವಾರದ ಬಳಿಯ ರಸ್ತೆಯ ಎರಡು ಕಡೆಯಲ್ಲೂ ರಬ್ಬರ್ ಹಂಪ್ಸ್ ನಿರ್ಮಾಣ ಮಾಡಬೇಕು ಹಾಗೂ ಶಾಲಾ-ಕಾಲೇಜು ವಲಯ ಫಲಕ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ವಲ್ಲೀಶ ಬಳಿ ಈ ಹಿಂದೆಯೂ ನಡೆದ ಅಪಘಾತದಲ್ಲಿ ಜೀವಹಾನಿಯಾಗಿತ್ತು. ಇದರಿಂದ ಸಂಬಂಧಪಟ್ಟ ಅಧಿಕಾರಿಗಳು ಈ ಕೂಡಲೇ ಎಚ್ಚೆತ್ತುಕೊಳ್ಳಬೇಕು ಎಂಬುದು ಗ್ರಾಮಸ್ಥರು, ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ.

died
ಮೃತ ಲೈನ್‌ ಮನ್‌ ದ್ಯಾಮಣ್ಣ ದೊಡ್ಮನಿ​

ವಿದ್ಯುತ್ ಪ್ರವಹಿಸಿ ಲೈನ್‌ಮನ್ ಸಾವು: ವಿದ್ಯುತ್ ಕಂಬ ಹತ್ತಿ ದುರಸ್ತಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್‌ಮನ್ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ದ್ಯಾಮಣ್ಣ ದೊಡ್ಮನಿ ಮೃತರೆಂದು ಗುರುತಿಸಲಾಗಿದೆ. ದ್ಯಾಮಣ್ಣ ತಲೆಕ್ಕಿ ಬಳಿ ವಿದ್ಯುತ್ ಕಂಬ ಹತ್ತಿ ದುರಸ್ತಿ ಮಾಡುತ್ತಿದ್ದ ವೇಳೆ ಹಠಾತ್ ವಿದ್ಯುತ್ ಪ್ರವಹಿಸಿ ಅವಘಡ ಸಂಭವಿಸಿದೆ‌. ಸ್ಥಳೀಯರು ಮರದ ಕೋಲಿನ ಸಹಾಯದಿಂದ ಮೇಲಿನಿಂದ ಅವರನ್ನು ಕೆಳಗಿಳಿಸಿದ್ದು ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸೋಮೇಶ್ವರ ಬೀಚ್​ನಲ್ಲಿ ನೈತಿಕ ಪೊಲೀಸ್​ಗಿರಿ: ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.