ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಘರ್ಷಣೆಯ ಹತ್ಯೆಗಳನ್ನು ಎಸ್‌ಐಟಿ ತನಿಖೆಗೆ ನೀಡಲು ಪ್ರಯತ್ನಿಸಲಾಗುವುದು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದರು. ಮಂಗಳೂರಿನಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹಲವು ಕೋಮು ಸಂಬಂಧಿ ಕೊಲೆಗಳಾಗಿದೆ. ಈ ಕೊಲೆಗಳಲ್ಲಿ ಸೂತ್ರಧಾರಿಗಳ ಬಂಧನವಾಗಬೇಕು ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಏಳು ಪ್ರಕರಣಗಳನ್ನು ಸಿಬಿಐಗೆ ಒಪ್ಪಿಸಿದ್ದರು. ಬಿಜೆಪಿ ಸರಕಾರ ಯಾವುದೇ ಪ್ರಕರಣವನ್ನೂ ಸಿಬಿಐಗೆ ನೀಡಿಲ್ಲ ಎಂದು ಇದೇ ವೇಳೆ ಟೀಕಿಸಿದರು.
ಇದನ್ನೂ ಓದಿ: ಮಂಗಳೂರಿನಲ್ಲಿ ಪ್ರಚೋದಕರು, ಹತ್ಯೆ ಸೂತ್ರಧಾರರನ್ನ ಬಂಧಿಸಿ: ರಮಾನಾಥ್ ರೈ