ETV Bharat / state

ಬಂಟ್ವಾಳದಲ್ಲಿ ಮಹಿಳೆ ನಾಪತ್ತೆ: ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ - ಬಂಟ್ವಾಳ ನಗರ ಪೊಲೀಸ್ ಠಾಣೆ

ಬಂಟ್ವಾಳದ ನೇತ್ರಾವತಿ ಸೇತುವೆ ಬಳಿಯಿಂದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತಪಡಿಸಲಾಗಿದೆ.

ass
ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಶಂಕೆ
author img

By

Published : Jul 11, 2020, 3:40 PM IST

ಬಂಟ್ವಾಳ: ನೇತ್ರಾವತಿ ಸೇತುವೆ ಬಳಿಯಿಂದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ನದಿಗೆ ಹಾರಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ತಾಲೂಕಿನ ಸಜೀಪಮೂಡ ಗ್ರಾಮದ ನಿವಾಸಿ ಗೋಪಿ ಪೂಜಾರಿ ಎಂಬ ಮಹಿಳೆ ಬಿ.ಸಿ.ರೋಡಿನ ಚಿಕ್ಕಯ್ಯಮಠ ಎಂಬಲ್ಲಿ ತನ್ನ ಅಕ್ಕನ ಮನೆಗೆ ಬಂದಿದ್ದರು. ಶುಕ್ರವಾರ ರಾತ್ರಿ ಎಂದಿನಂತೆ ಮಲಗಿದ್ದ ಆಕೆ ಮುಂಜಾನೆ 5 ಗಂಟೆಯ ವೇಳೆ ಮನೆಯಿಂದ ಕಾಣೆಯಾಗಿದ್ದಾರೆ. ನಂತರ ಮನೆಯವರು ಹುಡುಕಿದಾಗ ಪಾಣೆಮಂಗಳೂರು ನೂತನ ಸೇತುವೆಯ ಮೇಲೆ ಮಹಿಳೆ ಬಳಸುತ್ತಿದ್ದ ಶಾಲು ಹಾಗೂ ಕೈಯಲ್ಲಿದ್ದ ಬಳೆ ಬಿದ್ದಿರುವುದು ಪತ್ತೆಯಾಗಿದೆ.

ಈಕೆ ನೇತ್ರಾವತಿ ಸೇತುವೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಸಂಬಂಧಿಕರು ದೂರು ನೀಡಿದ್ದಾರೆ. ಇದರಿಂದ ಪೊಲೀಸರು, ಅಗ್ನಿಶಾಮಕ ದಳ ನದಿಯಲ್ಲಿ ಮಹಿಳೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.