ಕಡಬ (ದಕ್ಷಿಣ ಕನ್ನಡ): ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ಯುವತಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪಾಂಜೋಡಿ ಕಾಲೊನಿ ನಿವಾಸಿ ಕರಿಯ ಎಂಬುವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡ ಯುವತಿ. ಜುಲೈ 22ರಂದು ಬೆಳಗ್ಗೆ ಮನೆ ಸಮೀಪದ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣ ತಿಳಿದು ಬಂದಿಲ್ಲ. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.