ಬಂಟ್ವಾಳ: ತಾಲೂಕಿನ ಕರಿಯಂಗಳ ಗ್ರಾಮದಲ್ಲಿ ಹರಿಯುವ ಫಲ್ಗುಣಿ ನದಿಯಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಏ.19ರಂದು ನಡೆದಿದೆ.
ವೇದಾವತಿ ಎಂಬುವರು ಮೃತ ಮಹಿಳೆ. ನದಿ ಬದಿಯಲ್ಲಿ ವಾಯು ವಿಹಾರಕ್ಕಾಗಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿರುವುದಾಗಿ ದೂರು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.