ETV Bharat / state

ಬಂಟ್ವಾಳ: ಪೊಲೀಸರಿಗೆ ದೂರು ನೀಡಿದ್ದಕ್ಕೆ ಸಿಟ್ಟು... ಹಾಡಹಗಲೇ ಮಹಿಳೆಗೆ ಇರಿದು ಕೊಂದ - ಬಂಟ್ವಾಳದಲ್ಲಿ ಚೂರಿಯಿಂದ ಇರಿದು ಮಹಿಳೆ ಕೊಲೆ

ಹಾಡಹಗಲೇ ಮಹಿಳೆಗೆ ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ.

ಕೊಲೆ
ಕೊಲೆ
author img

By

Published : Jun 27, 2022, 10:35 PM IST

Updated : Jun 28, 2022, 7:13 AM IST

ಬಂಟ್ವಾಳ(ದಕ್ಷಿಣ ಕನ್ನಡ): ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಕೊಡಾಜೆ ಗಣೇಶ್ ನಗರದಲ್ಲಿ ಹಾಡಹಗಲೇ ಮಹಿಳೆಯೊಬ್ಬರನ್ನು ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ಸೋಮವಾರ ನಡೆದಿದೆ. ಶಕುಂತಳಾ ಮೃತ ಮಹಿಳೆಯಾಗಿದ್ದು, ಆರೋಪಿ ಶ್ರೀಧರ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಶಕುಂತಳಾ ಸುಮಾರು 5 ವರ್ಷಗಳಿಂದ ಪುತ್ತೂರಿನ ಕೊಂಬೆಟ್ಟುವಿನಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಕಳೆದ ಒಂದು ವರ್ಷದಿಂದ ಸ್ಕೂಟರ್​​ನಲ್ಲಿ ಪುತ್ತೂರಿಗೆ ಹೋಗಿ ಬರುತ್ತಿದ್ದರು. ಕೆಲ ತಿಂಗಳುಗಳ ಹಿಂದೆ ಯಮನಾಜೆ ಎಂಬಲ್ಲಿನ ನಿವಾಸಿ ಶ್ರೀಧರ್​ ಮಹಿಳೆಯ ಮನೆ ಬಳಿ ಬಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನಂತೆ. ಬಳಿಕ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೇ ಕಾರಣಕ್ಕೆ ಶ್ರೀಧರ್ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕೊಡಾಜೆಯಲ್ಲಿ ಆರೋಪಿಯು ಮಹಿಳೆಗೆ ಏಕಾಏಕಿ ಚೂರಿಯಿಂದ ಇರಿದಿದ್ದಾನೆ. ಗಾಯಗೊಂಡ ಆಕೆಯನ್ನು ಮಾಣಿಯಿಂದ ಆ್ಯಂಬುಲೆನ್ಸ್​ ಮೂಲಕ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಮಹಿಳೆಯ ಪತಿ‌ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಈ ಕೃತ್ಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಎಸ್​​ಪಿ ಋಷಿಕೇಶ್ ತಿಳಿಸಿದ್ದಾರೆ.

ಇದನ್ನೂ ಓದಿ: ಸಾಂಗ್ಲಿಯಲ್ಲಿ 9 ಜನರ ಸಾವಿನ ಪ್ರಕರಣ : ನಿಧಿಗಾಗಿ ವಿಷಪ್ರಾಶನ ಮಾಡಿದ ರಾಕ್ಷಸರು

Last Updated : Jun 28, 2022, 7:13 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.