ETV Bharat / state

3 ವರ್ಷಗಳಲ್ಲಿ 4,120 ಪ್ರಕರಣ ಇತ್ಯರ್ಥಗೊಳಿಸಿದ ಮಹಿಳಾ ಆಯೋಗ: ಪ್ರಮೀಳಾ ನಾಯ್ಡು

ರಾಜ್ಯದಲ್ಲಿ 2020 ರಿಂದ ಇದುವರಗೆ ಮಹಿಳಾ ಆಯೋಗಕ್ಕೆ 6,728 ದೂರುಗಳು ದಾಖಲಾಗಿವೆ.

State Commission for Women Chairperson Pramila R Naidu
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ಆರ್ ನಾಯ್ಡು
author img

By

Published : Mar 1, 2023, 7:33 PM IST

ಮಂಗಳೂರು: ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕೆಲಸ ನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ಆರ್ ನಾಯ್ಡು ತಿಳಿಸಿದರು. ನಗರದ ಜಿಲ್ಲಾ ಪಂಚಾಯತ್​ನ ವೀಡಿಯೋ ಸಂವಾದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಇತರ ಪ್ರಕರಣಗಳಲ್ಲಿ ಮಹಿಳೆಯರನ್ನು ರಕ್ಷಿಸಲು ಸಶಕ್ತವಾಗಿ ಕಾರ್ಯ ನಿರ್ವಹಣೆ ಮಾಡುತ್ತಿದೆ. ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾಖಲಾದ ದೂರುಗಳನ್ನು ಕೂಡಲೇ ಇತ್ಯರ್ಥ ಪಡಿಸುವ ಮತ್ತು ನೊಂದ ಮಹಿಳೆಯರಿಗೆ ನ್ಯಾಯ ಕೊಡಿಸುವ ಕೆಲಸವನ್ನು ಮಾಡುತ್ತಿದೆ. ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ದೂರುಗಳನ್ನು ದಾಖಲಿಸಿ ಕೊಂಡು ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದರು.

2020ರಿಂದ ಮಹಿಳಾ ಆಯೋಗವು ರಾಜ್ಯದಲ್ಲಿ 6,728 ದೂರುಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 4,120 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ವಿವಿಧ ಹಂತಗಳಲ್ಲಿ 2,608 ಪ್ರಕರಣಗಳು ಇತ್ಯರ್ಥಕ್ಕೆ ಇನ್ನೂ ಬಾಕಿ ಇದೆ. ಈ ದೂರುಗಳ ಪೈಕಿ 1,400ಕ್ಕೂ ಹೆಚ್ಚು ಪ್ರಕರಣಗಳು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ್ದರೆ, 1,905 ಪ್ರಕರಣಗಳು ರಕ್ಷಣೆಯನ್ನು ಕೋರಿ, 347 ವರದಕ್ಷಿಣೆ ಕಿರುಕುಳ, 26 ವರದಕ್ಷಿಣೆ ಸಾವು ಅಥವಾ ಕೊಲೆ, 37 ಲೈಂಗಿಕ ದೌರ್ಜನ್ಯ, 208 ಪೊಲೀಸ್ ದೌರ್ಜನ್ಯ ಪ್ರಕರಣಗಳಾಗಿವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕರ್ತವ್ಯದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 280 ಪ್ರಕರಣಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಇದುವರೆಗೆ 151 ಪ್ರಕರಣಗಳನ್ನು ಪರಿಹರಿಸಲಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಆಂತರಿಕ ದೂರು ಸಮಿತಿ ರಚಿಸುವಂತೆ 2,500 ಕಂಪನಿಗಳಿಗೆ ಪತ್ರ ಬರೆದಿದ್ದು, ಇದುವರೆಗೆ 1,100 ಕಂಪನಿಗಳಿಂದ ಉತ್ತರವನ್ನು ಸ್ವೀಕರಿಸಲಾಗಿದೆ ಎಂದು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯ ಸಿಡಿಪಿಒ ಕಚೇರಿಗಳಲ್ಲಿ ಒಟ್ಟು 722 ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 520 ಪ್ರಕರಣಗಳನ್ನು ಸಂಧಾನದ ಮೂಲಕ ಪರಿಹರಿಸಲಾಗಿದ್ದರೆ, 170 ಪ್ರಕರಣಗಳು ನ್ಯಾಯಾಲಯದಲ್ಲಿವೆ ಎಂದು ತಿಳಿಸಿದರು.

ಆಯೋಗವು ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಕೌನ್ಸೆಲಿಂಗ್ ಮೂಲಕ ಕುಟುಂಬ ಪುನರ್ಮಿಲನ ಮಾಡಲು ಹೆಚ್ಚು ಒತ್ತು ನೀಡುತ್ತಿದೆ. ಅಲ್ಲದೇ, ಹದಿಹರೆಯದವರಲ್ಲಿ ಪ್ರೇಮ ಪ್ರಕರಣಗಳು, ಲಿವ್ ಇನ್ ರಿಲೇಶನ್​ಶಿಪ್ ಮತ್ತು ಸೈಬರ್ ಅಪರಾಧಗಳ ಕುರಿತು ಶಾಲೆ, ಕಾಲೇಜುಗಳಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತು ನಿನ್ನೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಸಭೆ ನಡೆಸಲಾಗಿದೆ. ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹಾಗೂ ವಿವಾಹೇತರ ಸಂಬಂಧಗಳ ಬಗ್ಗೆ ಹೆಚ್ಚಿನ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬಂದಿವೆ ಎಂದು ಹೇಳಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪ ಭೋವಿ ಉಪಸ್ಥಿತರಿದ್ದರು.

ಇದನ್ನೂ ಓದಿ: "ಪೃಥ್ವಿ ಶಾ ಅನುಚಿತವಾಗಿ ವರ್ತಿಸಿದ್ದಾರೆ": ಸಪ್ನಾ ಗಿಲ್ ಆರೋಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.