ETV Bharat / state

ಕೋವಿಡ್ ಕಾಲಿಟ್ಟ ಬಳಿಕ ಗ್ರಾಮೀಣ ಪತ್ರಕರ್ತರಿಗೆ ಸಂಕಷ್ಟ: ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ - ಬಂಟ್ವಾಳ ಸುದ್ದಿ

ಬಂಟ್ವಾಳ ತಾಲೂಕಿನ‌ ಕಾರ್ಯನಿರತ ಪತ್ರಕರ್ತರಿಗೆ ಗುರುತಿನ ಚೀಟಿಯನ್ನು ವಿತರಿಸಲಾಯಿತು.

Journalist
Journalist
author img

By

Published : Aug 13, 2020, 7:17 PM IST

ಬಂಟ್ವಾಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ ನೀಡುವ ಗುರುತು ಚೀಟಿಯನ್ನು ಬಂಟ್ವಾಳ ತಾಲೂಕಿನ ಸದಸ್ಯರಿಗೆ ಗುರುವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದ.ಕ.ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮತ್ತು ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಿತರಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಕಾರ್ಯನಿರತ ಪತ್ರಕರ್ತರಲ್ಲಿ ಗ್ರಾಮೀಣ ಭಾಗದಲ್ಲಿ ದುಡಿಯುವವರು ಕೋವಿಡ್ ಬಳಿಕ ಹೆಚ್ಚಿನ ಸಮಸ್ಯೆ ಅನುಭವಿಸುತ್ತಿದ್ದು, ಈಗಾಗಲೇ ರಾಜ್ಯಾಧ್ಯಕ್ಷರು ಪರಿಹಾರಧನ ನೀಡುವ ಕುರಿತು ಮುಖ್ಯಮಂತ್ರಿ ಬಳಿ ಮಾತನಾಡಿದ್ದಾರೆ ಎಂದರು.

ಹಾಗೂ ಸಂಘದ ಸದಸ್ಯರಲ್ಲಿ ಅನೇಕರು ಅನಾರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದು, ಆಸ್ಪತ್ರೆಗಳ ಹೆಲ್ತ್ ಕಾರ್ಡ್ ನೀಡುವ ಕುರಿತು ಕಾರ್ಯಪ್ರವೃತ್ತರಾಗಿರುವುದಾಗಿ ಅವರು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ ಮಾಂಬಾಡಿ, ಪತ್ರಕರ್ತರ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಸಂಘದ ಸದಸ್ಯರಿಗೆ ಗುರುತುಚೀಟಿ, ಕ್ಷೇಮ ಹೆಲ್ತ್ ಕಾರ್ಡ್ ವಿತರಿಸಲಾಯಿತು. ಇದೇ ವೇಳೆ ಬೆಂಗಳೂರಿನಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆಯನ್ನು ಖಂಡಿಸಲಾಯಿತು.

ಈ ವೇಳೆ ಬಂಟ್ವಾಳ ಪ್ರೆಸ್ ಕ್ಲಬ್ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.