ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಂಗಳೂರು, ತಾಲೂಕು ಪಂಚಾಯತ್ ಪುತ್ತೂರು ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನವನ್ನ ಸೋಮವಾರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿ ಉಚಿತ ಸಸಿ ವಿತರಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ವತಿಯಿಂದ ಸುಮಾರು 100ಕ್ಕೂ ಮಿಕ್ಕಿದ ವಿವಿಧ ಜಾತಿಯ ಗಿಡಗಳನ್ನು ಸಾರ್ವಜನಿಕರಿಗೆ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾ.ಪಂ ಅಧ್ಯಕ್ಷ ಕೆ. ರಾಧಾಕೃಷ್ಣ ಬೋರ್ಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸದಸ್ಯೆ ಮೀನಾಕ್ಷಿ ಮಂಜುನಾಥ್, ಕಾರ್ಯ ನಿರ್ವಹಣಾಧಿಕಾರಿ ನವೀನ್ ಭಂಡಾರಿ, ತಾಪಂ ವಿಷಯ ನಿರ್ವಾಹಕ ಶಿವಪ್ರಕಾಶ್ ಅಡ್ಪಂಗಾಯ ಇದ್ದರು.