ETV Bharat / state

ಪ್ರಕೃತಿ ಸಂಪನ್ಮೂಲ ಮುಂದಿನ ಪೀಳಿಗೆಗೆ ಉಳಿಯಬೇಕಾದರೆ ಜನಸಂಖ್ಯಾ ನಿಯಂತ್ರಣ ಅಗತ್ಯ - undefined

ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಆಚರಿಸಲಾಗಿದೆ.

ವಿಶ್ವ ಜನಸಂಖ್ಯಾ ದಿನಾಚರಣೆ
author img

By

Published : Jul 12, 2019, 2:48 AM IST

ಮಂಗಳೂರು: ಮಾನವನು ಪ್ರಕೃತಿಯ ಸಂಪತ್ತನ್ನು‌ ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು. ಅದನ್ನು ಸಮರ್ಥವಾಗಿ ನಾವು ನಿರ್ವಹಿಸಬೇಕಾದರೆ ಮೊದಲಾಗಿ ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಡಬೇಕು ಎಂದು ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಅಭಿಪ್ರಾಯಪಟ್ಟರು.

ದ.ಕ. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ಮಂಗಳೂರು ವಿವಿಯಲ್ಲಿ ಗುರುವಾರ ಬೆಳಗ್ಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲಾ ಕಡೆಗಳಲ್ಲೂ ಜನಸಂಖ್ಯಾ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ, ಮರಣ ಹೊಂದುವವರ ಸಂಖ್ಯೆ ವಿರಳವಾಗುತ್ತಿದೆ. ಇದು ಉತ್ತಮ ಬೆಳವಣಿಗೆ. ಯಾಕೆಂದರೆ ಈಗ ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ದೊರೆಯುತ್ತಿದೆ. ಆದರೆ, ಜನಸಂಖ್ಯೆಯನ್ನು ಯಾವ ರೀತಿಯಲ್ಲಿ ನಿಯಂತ್ರಿಸಬಹುದು ಎಂಬುದರ ಬಗ್ಗೆ ಇನ್ನೂ ನಾವು ವಿಚಾರ ಮಾಡಿಲ್ಲ. ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟರೆ ಮಾತ್ರ ಎಲ್ಲರಿಗೂ ಸಂಪತ್ತಿನ ಬಳಕೆ ಮಾಡಲು ಸಾಧ್ಯ ಎಂದರು.

ಮಂಗಳೂರು ವಿವಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ

ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ‌.ಸಿಕಂದರ್ ಪಾಷಾ, ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ., ಉಪಾನ್ಯಾಸಕ ಡಾ.ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.

Intro:ಮಂಗಳೂರು: ಮಾನವನು ಪ್ರಕೃತಿಯ ಸಂಪತ್ತನ್ನು‌ ಮುಂದಿನ ಪೀಳಿಗೆಗೆ ಉಳಿಸುವ ಕೆಲಸ ಮಾಡಬೇಕು. ಅದನ್ನು ಸಮರ್ಥವಾಗಿ ನಾವು ನಿರ್ವಹಿಸಬೇಕಾದರೆ ಮೊದಲಾಗಿ ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಡಬೇಕು ಎಂದು ದ.ಕ.ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸೆಲ್ವಮಣಿ ಆರ್. ಹೇಳಿದರು.

ದ.ಕ.ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಮಂಗಳೂರು ವಿವಿ ರಾಷ್ಟ್ರೀಯ ಸೇವಾಯೋಜನೆಯ ವತಿಯಿಂದ ಮಂಗಳೂರು ವಿವಿಯಲ್ಲಿ ಇಂದು ಬೆಳಗ್ಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಕಡೆಗಳಲ್ಲೂ ಜನಸಂಖ್ಯಾ ಪ್ರಮಾಣ ಹೆಚ್ಚಾಗುತ್ತಿದೆ. ಆದರೆ ಮರಣ ಹೊಂದುವವರ ಸಂಖ್ಯೆ ವಿರಳವಾಗುತ್ತಿದೆ. ಇದು ಉತ್ತಮ ಬೆಳವಣಿಗೆ. ಯಾಕೆಂದರೆ ಈಗ ಆರೋಗ್ಯ ಸೇವೆ ಎಲ್ಲರಿಗೂ ಸುಲಭವಾಗಿ ದೊರೆಯುತ್ತಿದೆ. ಆದರೆ ಜನಸಂಖ್ಯೆಯನ್ನು ಯಾವ ರೀತಿಯಲ್ಲಿ ನಿಯಂತ್ರಿಸಬಹುದು ಎಂಬುದರ ಬಗ್ಗೆ ಇನ್ನೂ ನಾವು ವಿಚಾರ ಮಾಡಿಲ್ಲ. ಆದರೆ ನಾವು ಜನಸಂಖ್ಯೆಯನ್ನು ನಿಯಂತ್ರಣದಲ್ಲಿಟ್ಟರೆ ಮಾತ್ರ ಎಲ್ಲರಿಗೂ ಸಂಪತ್ತಿನ ಬಳಕೆ ಮಾಡಲು ಸಾಧ್ಯ ಎಂದು ಸೆಲ್ವಮಣಿ ಹೇಳಿದರು.

Body:ಜನಸಂಖ್ಯಾ ದಿನಾಚರಣೆಯನ್ನು ಆಚರಿಸುವ ಮುಖ್ಯ ಉದ್ದೇಶ ನಮ್ಮ ವೈಯುಕ್ತಿಕ ಆರೋಗ್ಯದೊಂದಿಗೆ ಕುಟುಂಬದ ಆರೋಗ್ಯ ಹಾಗೂ ಕುಟುಂಬ ಯೋಜನೆಯ ಜವಾಬ್ದಾರಿ ಇರುತ್ತದೆ. ನಾವು ಇಂದು ನಮ್ಮ ನೆಲ, ಜಲ ಹಾಗೂ ಇತರ ಸಂಪತ್ತುಗಳನ್ನು ಬಳಸಿ ಸಂತೋಷದಿಂದಿದ್ದೇವೆ‌. ಇದರೊಂದಿಗೆ ನಮ್ಮ ಮುಂದಿನ ಪೀಳಿಗೆಯವರಿಗೂ ಇದನ್ನು ಉಳಿಸುವ ದೊಡ್ಡ ಜವಾಬ್ದಾರಿ ಯೂ ನಮ್ಮ ಮೇಲಿದೆ. ಈ ಮೂಲಕ ನಾವು ನೆಲ, ಜಲ, ಪಕೃತಿ ಸಂಪನ್ಮೂಲಗಳನ್ನು ಮಾಲಿನ್ಯವಾಗದಂತೆ ರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಇಲ್ಲದಿದ್ದಲ್ಲಿ ಮುಂದಿನ ಪೀಳಿಗೆ ಆ ಸಂಪತ್ತನ್ನು ಬಳಸದಂತಾಗುತ್ತದೆ. ಆ ನಿಟ್ಟಿನಲ್ಲಿ ಜನಸಂಖ್ಯೆಯನ್ನು ನಿಯಂತ್ರಣ ಮಾಡುವ ಮಹತ್ತರವಾದ ಕೆಲಸ ನಮ್ಮಿಂದಾಗಬೇಕಾಗಿದೆ ಎಂದು ಡಾ.ಸೆಲ್ವಮಣಿ ಆರ್. ಹೇಳಿದರು.

ಈ ಸಂದರ್ಭ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ ರಾವ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ‌.ಸಿಕಂದರ್ ಪಾಷಾ, ಮಂಗಳೂರು ವಿವಿ ಕಾಲೇಜು ಪ್ರಾಂಶುಪಾಲ ಡಾ.ಉದಯ ಕುಮಾರ್ ಎಂ.ಎ., ಉಪಾನ್ಯಾಸಕ ಡಾ.ಯೋಗೀಶ್ ಕೈರೋಡಿ ಉಪಸ್ಥಿತರಿದ್ದರು.

Reporter_Vishwanath Panjimogaru

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.