ETV Bharat / state

ರಂಗಸ್ಥಳದಲ್ಲೇ ಹೃದಯಾಘಾತ: ಕಟೀಲು ಮೇಳದ ಕಲಾವಿದ ನಿಧನ - ETV Bharath Kannada news

ಕಟೀಲು ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು ರಂಗಸ್ಥಳದಲ್ಲೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

yakshagana artist has a heart attack in mangalore
ಗುರುವಪ್ಪ ಬಾಯಾರು
author img

By

Published : Dec 23, 2022, 9:52 AM IST

ರಂಗಸ್ಥಳದಲ್ಲೆ ಹೃದಯಾಘಾತ

ಮಂಗಳೂರು(ದಕ್ಷಿಣ ಕನ್ನಡ): ಯಕ್ಷಗಾನ ನಡೆಯುತ್ತಿದ್ದ ಸಂದರ್ಭದಲ್ಲಿ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಮೃತ ಪಟ್ಟವರು. ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ನಿನ್ನೆ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದ ವೇಳೆ ಹೃದಯಾಘಾತವಾಗಿದೆ.

ಕೂಡಲೇ ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ನಿಧನರಾಗಿದ್ದಾರೆ.

ಇದನ್ನೂ ಓದಿ: ಅತಿಥಿ ಶಿಕ್ಷಕನ ಕ್ರೌರ್ಯಕ್ಕೆ ವಿದ್ಯಾರ್ಥಿ ತಾಯಿ ಬಲಿ.. ಚಿಕಿತ್ಸೆ ಫಲಕಾರಿಯಾಗದೆ ಶಿಕ್ಷಕಿ ಗೀತಾ ಬಾರಕೇರ್ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.