ETV Bharat / state

ಕುಕ್ಕೆ ಸುಬ್ರಹ್ಮಣ್ಯದ ನೂತನ ಆಡಳಿತಾಧಿಕಾರಿಯಾಗಿ ಪುತ್ತೂರು ಎಸಿ ಯತೀಶ್ ಉಳ್ಳಾಲ್ ನೇಮಕ

ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ದ.ಕ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ನೂತನ ಆಡಳಿತಾಧಿಕಾರಿಯಾಗಿ ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.

author img

By

Published : Nov 27, 2020, 10:57 PM IST

Yatish Ullal as the new Administrative Officer in kukke administration
ಕುಕ್ಕೆ ಸುಬ್ರಹ್ಮಣ್ಯದ ನೂತನ ಆಡಳಿತ ಅಧಿಕಾರಿಯಾಗಿ ಪುತ್ತೂರು ಎ.ಸಿ ಯತೀಶ್ ಉಳ್ಳಾಲ್ ನೇಮಕ

ಸುಬ್ರಹ್ಮಣ್ಯ: ಪ್ರಸ್ತುತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿಯಾಗಿದ್ದ ದ.ಕ ಅಪರ ಜಿಲ್ಲಾಧಿಕಾರಿ ರೂಪಾ ಅವರನ್ನು ಬದಲಾಯಿಸಲಾಗಿದ್ದು, ನೂತನ ಆಡಳಿತಾಧಿಕಾರಿಯಾಗಿ ಪುತ್ತೂರು ಉಪ ವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಅವರನ್ನು ನೇಮಕ ಮಾಡಲಾಗಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸರ್ಕಾರದ ಆದೇಶದ ಪ್ರಕಾರ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ಅಧಿನಿಯಮ 1997ರ ವಿಧಿ 29ರನ್ವಯ ದೇವಾಲಯದ ದೈನಂದಿನ ಆಡಳಿತ ನಿರ್ವಹಣೆ ಹಾಗೂ ಆರ್ಥಿಕ ವ್ಯವಹಾರಗಳನ್ನು ನಿರ್ವಹಿಸುವ ಹಿತದೃಷ್ಟಿಯಿಂದ ಅಪರ ಜಿಲ್ಲಾಧಿಕಾರಿಯನ್ನು ವ್ಯವಸ್ಥಾಪನಾ ಸಮಿತಿ ರಚನೆ ಆಗುವವರೆಗೂ ಅಥವಾ 6 ತಿಂಗಳ ಅವಧಿಯವರೆಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಲಾಗಿತ್ತು.

ಆದರೆ ಅಪರ ಜಿಲ್ಲಾಧಿಕಾರಿಯವರಿಗೆ ಕಚೇರಿಯಲ್ಲಿ ಕೆಲಸದ ಒತ್ತಡ ಇರುವುದರಿಂದ ಹಾಗೂ ದೇವಸ್ಥಾನದಲ್ಲಿ ಡಿಸೆಂಬರ್ ತಿಂಗಳಲ್ಲಿ ಚಂಪಾ ಷಷ್ಠಿ ಉತ್ಸವ ಇರುವುದರಿಂದ ಉತ್ಸವದ ಉಸ್ತುವಾರಿ ಬಗ್ಗೆ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ. ಹಾಗಾಗಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಅಪರ ಜಿಲ್ಲಾಧಿಕಾರಿ ರೂಪ ಅವರ ಬದಲಿಗೆ ಕುಕ್ಕೆ ಸುಹ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿ ಹುದ್ದೆಗೆ ಸಹಾಯಕ ಆಯುಕ್ತರು, ಪುತ್ತೂರು ಉಪವಿಭಾಗ, ಅವರನ್ನು ಜಿಲ್ಲಾಧಿಕಾರಿಗಳು ನೇಮಕಾತಿ ಮಾಡಿದ್ದಾರೆ.

ಡಾ. ಯತೀಶ್ ಉಳ್ಳಾಲ್ ಕಳೆದ ಬಾರಿಯ ಚಂಪಾ ಷಷ್ಠಿ ಸಂದರ್ಭದಲ್ಲೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಜವಾಬ್ದಾರಿಯಲ್ಲಿದ್ದು, ಜಾತ್ರಾ ಉತ್ಸವವನ್ನು ಸುಸೂತ್ರವಾಗಿ ನೆರವೇರಿಸಲು ಕಾರಣಕರ್ತರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.