ETV Bharat / state

ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾದ ಯುವ ಉದ್ಯಮಿ..!? - Suicide by resident of Gurupur Mangalore

ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

Young entrepreneur committed suicide due to financial crisis ..!?
ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾದ ಯುವ ಉದ್ಯಮಿ..!?
author img

By

Published : Jan 21, 2021, 11:27 AM IST

ಮಂಗಳೂರು: ಮಂಗಳೂರಿನಲ್ಲಿ ಯುವ ಉದ್ಯಮಿಯೊಬ್ಬರು ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ಲೆಕ್ಸ್ ಉದ್ಯಮ ನಡೆಸುತ್ತಿದ್ದ ಯುವ ಉದ್ಯಮಿ ಚಂದ್ರಶೇಖರ್ ಶೆಟ್ಟಿ (38) ಆತ್ಮಹತ್ಯೆಗೆ ಶರಣಾದವರು. ಮಂಗಳೂರಿನ ಗುರುಪುರದ ನಿವಾಸಿಯಾಗಿರುವ ಚಂದ್ರಶೇಖರ್ ಅವರು ಮಂಗಳೂರಿನ ಹಂಪನಕಟ್ಟೆಯಲ್ಲಿ ಕಚೇರಿ ಹೊಂದಿದ್ದಾರೆ. ಇದೇ ಕಚೇರಿಯಲ್ಲಿ ಅವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭ ಸ್ಥಳೀಯ ಅಂಗಡಿಯವರು ಇವರ ಕಚೇರಿಗೆ ಆಗಮಿಸಿದ್ದು, ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.

ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಮಂಗಳೂರು ಉತ್ತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.